ನವದೆಹಲಿ: ದೇಶದ ಅತಿದೊಡ್ಡ ಬ್ಯಾಂಕಿಂಗ್ ಕಂಪನಿಯಾದ ಎಸ್ಬಿಐ ಸೆಪ್ಟೆಂಬರ್ ತ್ರೈಮಾಸಿಕದ ಲಾಭದಲ್ಲಿ ಶೇಕಡ 10ರಷ್ಟು ಹೆಚ್ಚಳ ದಾಖಲಿಸಿದೆ. ಈ ತ್ರೈಮಾಸಿಕದಲ್ಲಿ ಎಸ್ಬಿಐ ಲಾಭವು ₹20,160 ಕೋಟಿ ಆಗಿದೆ.

ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್ನ ಲಾಭವು ₹18,331 ಕೋಟಿ ಆಗಿತ್ತು. ಬ್ಯಾಂಕ್ನ ಒಟ್ಟು ವರಮಾನವು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹1.34 ಲಕ್ಷ ಕೋಟಿಗೆ ಹೆಚ್ಚಾಗಿದೆ. ಇದು ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹1.29 ಲಕ್ಷ ಕೋಟಿ ಆಗಿತ್ತು.

ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಬ್ಯಾಂಕ್ನ ಅನುತ್ಪಾದಕ ಸಾಲಗಳ (ಎನ್ಪಿಎ) ಪ್ರಮಾಣದಲ್ಲಿ ಸುಧಾರಣೆ ಕಂಡುಬಂದಿದ್ದು, ಅದು ಶೇಕಡ 1.73ಕ್ಕೆ ಇಳಿಕೆ ಆಗಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಅನುತ್ಪಾದಕ ಸಾಲಗಳ ಪ್ರಮಾಣವು ಶೇ 2.13ರಷ್ಟು ಇತ್ತು.

ನಿವ್ವಳ ಎನ್ಪಿಎ ಪ್ರಮಾಣವು ಹಿಂದಿನ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ 0.53ರಷ್ಟು ಇದ್ದಿದ್ದು ಈ ಬಾರಿ ಶೇ 0.42ಕ್ಕೆ ಇಳಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.