ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಬಿಐ ಲಾಭ ಶೇ 41ರಷ್ಟು ಹೆಚ್ಚಳ

Last Updated 13 ಮೇ 2022, 12:37 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಮಾರ್ಚ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ₹ 9,114 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಬ್ಯಾಂಕ್ ₹ 6,451 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇಕಡ 41ರಷ್ಟು ಹೆಚ್ಚಾಗಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ.

ಒಟ್ಟು ವರಮಾನವು ₹ 81,327 ಕೋಟಿಯಿಂದ ₹ 82,613 ಕೋಟಿಗೆ ಏರಿಕೆ ಆಗಿದೆ. ವಸೂಲಾಗದ ಸಾಲದ ಸರಾಸರಿ (ಎನ್‌ಪಿಎ) ಪ್ರಮಾಣವು ಶೇ 4.98ರಿಂದ ಶೇ 3.97ಕ್ಕೆ ಇಳಿಕೆ ಆಗಿದೆ. ನಿವ್ವಳ ಎನ್‌ಪಿಎ ಶೇ 1.50ರಿಂದ ಶೇ 1.02ಕ್ಕೆ ಇಳಿಕೆ ಆಗಿದೆ.

2021–22ನೇ ಹಣಕಾಸು ವರ್ಷಕ್ಕೆ ಬ್ಯಾಂಕ್‌ನ ಒಟ್ಟಾರೆ ಲಾಭವು ₹ 31,676 ಕೋಟಿಗೆ ತಲುಪಿದೆ. ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ 55ರಷ್ಟು ಏರಿಕೆ ಆಗಿದೆ.

ಲಾಭಾಂಶ: 2022ರ ಮಾರ್ಚ್‌ಗೆ ಕೊನೆಗೊಂಡ ಹಣಕಾಸು ವರ್ಷಕ್ಕೆ ಪ್ರತಿ ಷೇರಿಗೆ ₹ 7.10ರಷ್ಟು ಲಾಭಾಂಶ ನೀಡಲು ಬ್ಯಾಂಕ್‌ನ ಆಡಳಿತ ಮಂಡಳಿ ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT