ನವದೆಹಲಿ / ಕೋಲ್ಕತ್ತ (ಪಿಟಿಐ): ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೇ 25 ಮತ್ತು 26ರಂದು ಕರೆ ನೀಡಿದ್ದ ಮುಷ್ಕರವನ್ನು ಆಲ್ ಇಂಡಿಯಾ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಫೆಡರೇಷನ್ (ಎಐಎಸ್ಬಿಐಎಸ್ಎಫ್) ಮುಂದೂಡಿದೆ.

ಸೋಮವಾರ ಮತ್ತು ಮಂಗಳವಾರ ಭಾರತೀಯ ಸ್ಟೇಟ್ ಬ್ಯಾಂಕ್ನ (ಎಸ್ಬಿಐ) ಶಾಖೆಗಳಲ್ಲಿ ಎಂದಿನಂತೆ ಕಾರ್ಯಾಚರಣೆ ನಡೆಯಲಿದೆ.

ಬ್ಯಾಂಕ್ನ ಆಡಳಿತ ಮಂಡಳಿ ಮತ್ತು ನೌಕರರ ಸಂಘಗಳ ಪ್ರತಿನಿಧಿಗಳ ನಡುವೆ ಮುಂಬೈನಲ್ಲಿ ನಡೆದ ಸಕಾರಾತ್ಮಕ ಮಾತುಕತೆಯ ಬಳಿಕ ದೇಶಾದ್ಯಂತ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಎಸ್ಬಿಐನ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-51-1496958124

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.