ನವದೆಹಲಿ: ಪರಿಸರ ರಕ್ಷಣೆಗಾಗಿ ಪ್ರಸಕ್ತ ವರ್ಷದಲ್ಲಿ 18 ಲಕ್ಷ ಸಸಿ ನೆಡಲಾಗುವುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸೋಮವಾರ ತಿಳಿಸಿದೆ.
‘ಏಕ್ ಪೇಡ್ ಮಾ ಕೆ ನಾಮ್' (ತಾಯಿಯ ಹೆಸರಿನಲ್ಲಿ ಒಂದು ಮರ) ಅಭಿಯಾನಕ್ಕೆ ಹೈದರಾಬಾದ್‌ನಲ್ಲಿ ಚಾಲನೆ ನೀಡಲಾಯಿತು.
ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್‌ಆರ್) ಬ್ಯಾಂಕ್‌ನ ಸಿಬ್ಬಂದಿಗೆ ಸಸಿ ನೆಡುವಂತೆ ಉತ್ತೇಜನ ನೀಡಲಾಗುವುದು ಎಂದು ಹೇಳಿದೆ.
ಜೂನ್ 5ರಂದು ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಅಭಿಯಾನವನ್ನು ಪ್ರಾರಂಭಿಸಿದರು. ಅಲ್ಲದೇ ಭಾರತ ಮತ್ತು ಜಗತ್ತಿನಾದ್ಯಂತ ಪ್ರತಿಯೊಬ್ಬರೂ ತಮ್ಮ ತಮ್ಮ ತಾಯಿಯ ಹೆಸರಿನಲ್ಲಿ ಸಸಿ ನೆಡುವಂತೆ ಪ್ರೇರೇಪಿಸಿದ್ದರು.