ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾಕ್ಕೆ ಎಸ್‌ಬಿಐ ವತಿಯಿಂದ ₹ 7,596 ಕೋಟಿ ಸಾಲ

Last Updated 17 ಮಾರ್ಚ್ 2022, 15:35 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತೀಯ ಸ್ಟೇಟ್‌ ಬ್ಯಾಂಕ್ (ಎಸ್‌ಬಿಐ) ಶ್ರೀಲಂಕಾ ದೇಶಕ್ಕೆ ಆಹಾರ, ಔಷಧ ಮತ್ತು ಇತರ ಅಗತ್ಯ ವಸ್ತುಗಳನ್ನು ಖರೀದಿಸಲು ಒಟ್ಟು ₹ 7,596 ಕೋಟಿ ಸಾಲ ನೀಡಲಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಗುರುವಾರ ತಿಳಿಸಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಶ್ರೀಲಂಕಾದ ಹಣಕಾಸು ಸಚಿವ ಬಸಿಲ್ ರಾಜಪಕ್ಸ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.

‘ಸಾಲ ನೀಡುವುದಕ್ಕೆ ಸಂಬಂಧಿಸಿದಂತೆ ಎಸ್‌ಬಿಐ ಅಧಿಕಾರಿಗಳು ಮತ್ತು ಶ್ರೀಲಂಕಾ ಸರ್ಕಾರದ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ’ ಎಂದು ಸಚಿವಾಲಯ ಟ್ವೀಟ್ ಮಾಡಿದೆ.

ಭಾರತೀಯ ಆಮದು–ರಫ್ತು ಬ್ಯಾಂಕ್ (ಎಕ್ಸಿಂ ಬ್ಯಾಂಕ್) ಈ ಮೊದಲು ಶ್ರೀಲಂಕಾಕ್ಕೆ ಪೆಟ್ರೋಲಿಯಂ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ₹ 3,797 ಕೋಟಿ ಸಾಲ ಒದಗಿಸಿತ್ತು. ಶ್ರೀಲಂಕಾ ದೇಶವು ಹಣಕಾಸಿನ ತೀವ್ರ ಬಿಕ್ಕಟ್ಟು ಎದುರಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT