ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಮುಂದಿನ ಐದು ವರ್ಷದೊಳಗೆ ತನ್ನ ಮಹಿಳಾ ಉದ್ಯೋಗಿಗಳ ಪ್ರಮಾಣವನ್ನು ಶೇ 30ಕ್ಕೆ ಹೆಚ್ಚಿಸುವ ಗುರಿಯನ್ನು ಕೈಗೊಂಡಿದೆ.

ಗ್ರಾಹಕರೊಂದಿಗೆ ನೇರವಾಗಿ ಸಂವಹನ ನಡೆಸುವ ಬ್ಯಾಂಕ್ನ ಸಿಬ್ಬಂದಿಯಲ್ಲಿ ಮಹಿಳಾ ಉದ್ಯೋಗಿಗಳ ಪ್ರಮಾಣವು ಈಗ ಶೇ 33ರಷ್ಟಿದೆ. ಆದರೆ, ಒಟ್ಟು ಸಿಬ್ಬಂದಿಯಲ್ಲಿ ಮಹಿಳೆಯರ ಪ್ರಮಾಣ ಶೇ 27ರಷ್ಟಿದೆ. ಹೀಗಾಗಿ, ಮಹಿಳಾ ಉದ್ಯೋಗಿಗಳ ಪ್ರಮಾಣವನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬ್ಯಾಂಕ್ನ ಉಪ ವ್ಯವಸ್ಥಾಪಕ ನಿರ್ದೇಶಕ (ಮಾನವ ಸಂಪನ್ಮೂಲ ವಿಭಾಗ) ಮತ್ತು ಮುಖ್ಯ ಅಭಿವೃದ್ಧಿ ಅಧಿಕಾರಿ (ಸಿಡಿಒ) ಕಿಶೋರ್ ಕುಮಾರ್ ಪೋಲುದಾಸು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಈಗ ಎಸ್ಬಿಐ ಬ್ಯಾಂಕ್ನಲ್ಲಿ ಒಟ್ಟು 2.4 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಇದ್ದಾರೆ. ದೇಶದ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅತಿಹೆಚ್ಚು ಸಿಬ್ಬಂದಿ ಹೊಂದಿರುವ ಕಂಪನಿ ಇದಾಗಿದೆ.

ಬ್ಯಾಂಕ್ನ ಒಟ್ಟು ಶಾಖೆಗಳ ಪೈಕಿ 340ಕ್ಕೂ ಹೆಚ್ಚು ಶಾಖೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ (ಶೇ 100 ರಷ್ಟು) ಮಹಿಳಾ ಉದ್ಯೋಗಿಗಳಿದ್ದು, ಅವರೇ ಬ್ಯಾಂಕ್ನ ಕಾರ್ಯಕಲಾಪಗಳನ್ನು ನಿರ್ವಹಿಸುತ್ತಿದ್ದಾರೆ. ಈ ಪ್ರಮಾಣ ಮುಂದಿನ ದಿನಗಳಲ್ಲಿ ಹೆಚ್ಚಾಗಲಿದೆ ಎಂದರು.
.ವಿಜಯಪುರ |ಚಡಚಣ ಎಸ್ಬಿಐ ಬ್ಯಾಂಕ್ ದರೋಡೆ: ಆರೋಪಿಗಳ ಬಂಧನ, 9.01 ಕೆ.ಜಿ ಬಂಗಾರ ವಶ.ಚಡಚಣ ಎಸ್ಬಿಐ ಬ್ಯಾಂಕ್ ದರೋಡೆ ಕೇಸ್: ಪಾಳು ಬಿದ್ದ ಮನೆಯಲ್ಲಿ ಬಂಗಾರ, ನಗದು ವಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.