ಮುಂಬೈ: ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವಿನ ಮುಕ್ತ ವ್ಯಾಪಾರ ಒಪ್ಪಂದವು (ಎಫ್ಟಿಎ) ದೇಶದ ಷೇರುಪೇಟೆಗಳಲ್ಲಿ ಮಂಗಳವಾರ ತೇಜಿ ವಹಿವಾಟು ನಡೆಯಲು ನೆರವಾಗಿವೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 319 ಅಂಶ ಹಾಗೂ ರಾಷ್ಟ್ರೀಯ ಷೇರುಪೇಟೆ ಸಂವೇದಿಕೆ ಸೂಚ್ಯಂಕ ನಿಫ್ಟಿ 126 ಅಂಶ ಏರಿಕೆ ದಾಖಲಿಸಿವೆ.

ಲೋಹ, ಬ್ಯಾಂಕಿಂಗ್ ವಲಯದ ಷೇರುಗಳನ್ನು ಹೂಡಿಕೆದಾರರು ಹೆಚ್ಚು ಖರೀದಿಸಿರುವುದು ಕೂಡ ಸೂಚ್ಯಂಕಗಳ ಏರಿಕೆಗೆ ನೆರವಾಗಿದೆ ಎಂದು ವರ್ತಕರು ತಿಳಿಸಿದ್ದಾರೆ.

‘ದೇಶದ ಷೇರುಪೇಟೆಗಳಲ್ಲಿ ಬಹಳ ಲೆಕ್ಕಾಚಾರದ, ಎಚ್ಚರಿಕೆಯ ವಹಿವಾಟು ನಡೆಯುತ್ತಿದೆ. ಆದರೆ ಭಾರತ ಮತ್ತು ಐರೋಪ್ಯ ಒಕ್ಕೂಟದ ನಡುವೆ ಎಫ್ಟಿಎ ಮಾತುಕತೆ ಪೂರ್ಣಗೊಂಡಿರುವುದು ಹೂಡಿಕೆದಾರರಲ್ಲಿ ಒಂದಿಷ್ಟು ಸಮಾಧಾನ ಮೂಡಿಸಿದೆ’ ಎಂದು ಎನ್ರಿಚ್ ಮನಿ ಸಂಸ್ಥೆಯ ಸಿಇಒ ಪೊನ್ಮುಡಿ ಆರ್. ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.