ನವದೆಹಲಿ: ಹಿತಾಸಕ್ತಿ ಸಂಘರ್ಷ ಆರೋಪ ಕುರಿತಂತೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಮಾಜಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ವಿರುದ್ಧ ದಾಖಲಾಗಿದ್ದ ದೂರುಗಳನ್ನು, ಭ್ರಷ್ಟಾಚಾರ ನಿಗ್ರಹ ಸಂಸ್ಥೆಯಾದ ಲೋಕಪಾಲ ಬುಧವಾರ ವಜಾಗೊಳಿಸಿದೆ.

ಅಮೆರಿಕದ ಶಾರ್ಟ್ ಸೆಲ್ಲರ್ ಕಂಪನಿ ಹಿಂಡನ್ಬರ್ಗ್ ವರದಿ ಆಧರಿಸಿ ಮಾಧವಿ ವಿರುದ್ಧ ಪ್ರತ್ಯೇಕವಾಗಿ ಎರಡು ದೂರುಗಳು ದಾಖಲಾಗಿದ್ದವು. ಇದಕ್ಕೆ ಸಂಬಂಧಿಸಿದಂತೆ ದೂರುದಾರರು ಪರಿಶೀಲಿಸಬಹುದಾದ ಪೂರಕ ದಾಖಲೆಗಳನ್ನು ಸಲ್ಲಿಸಿಲ್ಲ. ಕೇವಲ ಹಿಂಡನ್ಬರ್ಗ್ ವರದಿ ಆಧರಿಸಿ ಪೂರ್ವಗ್ರಹಿಕೆಯ ದೂರುಗಳನ್ನು ಸಲ್ಲಿಸಿದ್ದಾರೆ. ಹಾಗಾಗಿ, ಇವುಗಳನ್ನು ವಜಾಗೊಳಿಸಲಾಗಿದೆ ಎಂದು ತಿಳಿಸಿದೆ.

ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಮಾಧವಿ ಮತ್ತು ಅವರ ಪತಿ ಧವಳ್ ಬುಚ್ ಪಾಲುದಾರಿಕೆ ಹೊಂದಿದ್ದಾರೆ ಎಂದು ಹಿಂಡನ್ಬರ್ಗ್ ರಿಸರ್ಚ್ ಆರೋಪಿಸಿತ್ತು. ಇದನ್ನು ಬುಚ್ ದಂಪತಿ ಅಲ್ಲಗೆಳೆದಿದ್ದರು.

ಮಾಧವಿ ವಿರುದ್ಧ ದಾಖಲಾಗಿದ್ದ ಎರಡು ದೂರುಗಳ ಪೈಕಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಂಸದೆ ಮಹುವಾ ಮೊಯಿತ್ರಾ ದೂರು ಕೂಡ ಒಂದಾಗಿದೆ. ಕಳೆದ ವರ್ಷ ಅವರು ಈ ದೂರು ಸಲ್ಲಿಸಿದ್ದರು.

ದೂರುದಾರರು ಆರೋಪಕ್ಕೆ ಸಂಬಂಧಿಸಿದಂತೆ ಸೂಕ್ತ ಪುರಾವೆಗಳನ್ನು ಸಲ್ಲಿಸಿಲ್ಲ. ಹಾಗಾಗಿ, ಈ ದೂರುಗಳನ್ನು ವಜಾಗೊಳಿಸಲಾಗಿದೆ ಎಂದು ಲೋಕಪಾಲ ಮುಖ್ಯಸ್ಥ ನ್ಯಾ ಎ.ಎಂ. ಖಾನ್ವಿಲ್ಕರ್ ಅವರಿದ್ದ ಆರು ಸದಸ್ಯರ ಪೀಠ ಆದೇಶಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.