ಭಾನುವಾರ, ಜೂನ್ 26, 2022
26 °C

₹ 3.12 ಕೋಟಿ ಪಾವತಿಸುವಂತೆ ಚಿತ್ರಾಗೆ ನೋಟಿಸ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಮಾಜಿ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಅವರಿಗೆ ನೋಟಿಸ್ ಜಾರಿಗೊಳಿಸಿರುವ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿ (ಸೆಬಿ), ಎನ್‌ಎಸ್‌ಇ ಆಡಳಿತದಲ್ಲಿನ ಲೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ₹ 3.12 ಕೋಟಿ ಪಾವತಿಸುವಂತೆ ಹೇಳಿದೆ.

ಈ ಮೊತ್ತವನ್ನು 15 ದಿನಗಳಲ್ಲಿ ಪಾವತಿ ಮಾಡದಿದ್ದರೆ ಬಂಧಿಸಲಾಗುತ್ತದೆ, ಬ್ಯಾಂಕ್ ಖಾತೆ ಮತ್ತು ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಸೆಬಿ ವಿಧಿಸಿರುವ ದಂಡವನ್ನು ಪಾವತಿಸಲು ಚಿತ್ರಾ ವಿಫಲವಾಗಿರುವ ಕಾರಣ ಈ ನೋಟಿಸ್ ಜಾರಿ ಮಾಡಲಾಗಿದೆ.

ಆನಂದ ಸುಬ್ರಮಣಿಯನ್ ಅವರನ್ನು ಎನ್‌ಎಸ್‌ಇ ಗ್ರೂಪ್ ಆಪರೇಟಿಂಗ್ ಆಫೀಸರ್ ಆಗಿ ನೇಮಕ ಮಾಡುವಲ್ಲಿ ಲೋಪ ಎಸಗಿದ ಆರೋಪದ ಅಡಿಯಲ್ಲಿ ಚಿತ್ರಾ ಅವರಿಗೆ ₹ 3 ಕೋಟಿ ದಂಡವನ್ನು ಸೆಬಿ ವಿಧಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು