ಭಾನುವಾರ, ಸೆಪ್ಟೆಂಬರ್ 27, 2020
28 °C

ಎಸ್‌ಬಿಐ, ಎಲ್‌ಐಸಿ, ಬ್ಯಾಂಕ್‌ ಆಫ್‌ ಬರೋಡಾಗೆ ದಂಡ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ), ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಹಾಗೂ ಬ್ಯಾಂಕ್‌ ಆಫ್ ಬರೋಡಾ ಮೇಲೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ತಲಾ ₹ 10 ಲಕ್ಷ ದಂಡ ವಿಧಿಸಿದೆ.

ಮ್ಯೂಚುವಲ್‌ ಫಂಡ್‌ಗಳಿಗೆ ಸಂಬಂಧಿಸಿದ ನಿಯಮಗಳನ್ನು ಪಾಲಿಸದೆ ಇದ್ದುದಕ್ಕಾಗಿ ಈ ದಂಡ ವಿಧಿಸಲಾಗಿದೆ.  ಎಸ್‌ಬಿಐ, ಎಲ್‌ಐಸಿ ಮತ್ತು ಬ್ಯಾಂಕ್‌ ಆಫ್‌ ಬರೋಡಾ ತಮ್ಮದೇ ಆದ ಮ್ಯೂಚುವಲ್‌ ಫಂಡ್‌ ಕಂಪನಿ ನಡೆಸುತ್ತಿವೆ.

ಇವು ಈ ಮ್ಯೂಚುವಲ್‌ ಫಂಡ್‌ ಕಂಪನಿಗಳಲ್ಲಿ ಶೇಕಡ 10ರಷ್ಟಕ್ಕಿಂತ ಹೆಚ್ಚಿನ ಪಾಲನ್ನು ಹೊಂದಿವೆ.

ಎಲ್‌ಐಸಿ, ಎಸ್‌ಬಿಐ ಹಾಗೂ ಬ್ಯಾಂಕ್ ಆಫ್ ಬರೋಡಾ ಸಂಸ್ಥೆಗಳು, ಯುಟಿಐ ಆಸ್ತಿ ನಿರ್ವಹಣಾ ಕಂಪನಿಯ ಪ್ರಾಯೋಜಕರಾಗಿದ್ದು, ಅಲ್ಲಿಯೂ ಶೇ 10ಕ್ಕಿಂತ ಹೆಚ್ಚಿನ ಪಾಲು ಹೊಂದಿವೆ ಎಂಬುದು ಸೆಬಿ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು