ಗುರುವಾರ , ಮೇ 6, 2021
23 °C

ಕೋವಿಡ್‌ ಎರಡನೇ ಅಲೆಯಿಂದ ಆರ್ಥಿಕತೆಗೆ ತೊಂದರೆ: ವರದಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಕೋವಿಡ್–19 ಪ್ರಕರಣಗಳಲ್ಲಿ ಆಗುತ್ತಿರುವ ಹೆಚ್ಚಳವು ಆರ್ಥಿಕ ಪುನಶ್ಚೇತನಕ್ಕೆ ಅಪಾಯ ತಂದೊಡ್ಡಿದೆ ಎಂದು ಬ್ಯಾಂಕ್‌ ಆಫ್‌ ಅಮೆರಿಕಾ ಸೆಕ್ಯುರಿಟೀಸ್‌ ಹೇಳಿದೆ. 2020–21ರ ಮಾರ್ಚ್‌ ತ್ರೈಮಾಸಿಕದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪಾದನೆಯಲ್ಲಿನ (ಜಿಡಿಪಿ) ಬೆಳವಣಿಗೆಯು ಶೇಕಡ 3ರಷ್ಟು ಆಗಿರುವ ಸಾಧ್ಯತೆ ಕಡಿಮೆ ಎಂದು ಅದು ಹೇಳಿದೆ.

ಬೆಳವಣಿಗೆಯ ಪ್ರಮಾಣವು ದುರ್ಬಲವಾಗಿದೆ. ಅರ್ಥ ವ್ಯವಸ್ಥೆಯ ಆರೋಗ್ಯವನ್ನು ಹೇಳುವ ಪ್ರಮುಖ ಸೂಚ್ಯಂಕಗಳು ಇಳಿಕೆ ಕಂಡಿವೆ. ಸಾಲ ನೀಡುವ ಪ್ರಮಾಣ ಕುಂದಿದೆ. ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಿರುವುದು ಸಮಸ್ಯೆಯನ್ನು ಜಾಸ್ತಿ ಮಾಡುತ್ತಿದೆ ಎಂದು ಅದು ಹೇಳಿದೆ.

ಕೋವಿಡ್‌ನ ಎರಡನೆಯ ಅಲೆಯು ರಾಷ್ಟ್ರಮಟ್ಟದಲ್ಲಿ ಲಾಕ್‌ಡೌನ್‌ ಇಲ್ಲದೆಯೂ ಕಡಿಮೆ ಆಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ. ದೇಶದ ಜಿಡಿಪಿಗೆ ಶೇಕಡ 16ಕ್ಕಿಂತ ಹೆಚ್ಚಿನ ಕೊಡುಗೆ ನೀಡುವ ಮಹಾರಾಷ್ಟ್ರ ರಾಜ್ಯದಲ್ಲಿ ಈಗಾಗಲೇ ಲಾಕ್‌ಡೌನ್‌ ರೀತಿಯ ನಿರ್ಬಂಧಗಳನ್ನು ಜಾರಿಗೆ ತರಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು