ಮಂಗಳವಾರ, ಡಿಸೆಂಬರ್ 7, 2021
23 °C

ಸೆಮಿಕಂಡಕ್ಟರ್ ಉದ್ಯಮಕ್ಕೆ ಅಗತ್ಯ ನೀತಿ: ಸಚಿವ ರಾಜೀವ್ ಚಂದ್ರಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಎಲೆಕ್ಟ್ರಾನಿಕ್ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ನಾಯಕನ ಸ್ಥಾನಕ್ಕೆ ಕೊಂಡೊಯ್ಯುವ ಮಹತ್ವಾಕಾಂಕ್ಷೆಯನ್ನು ಕೇಂದ್ರ ಸರ್ಕಾರ ಹೊಂದಿದೆ. ಸೆಮಿಕಂಡಕ್ಟರ್ ತಯಾರಿಕಾ ಕಂಪನಿಗಳಿಗೆ ಹಾಗೂ ನವೋದ್ಯಮಗಳಿಗೆ ಅಗತ್ಯವಿರುವ ನೀತಿಗಳನ್ನು ರೂಪಿಸಲಾಗುತ್ತದೆ’ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಐ.ಟಿ. ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಉದ್ಯಮಿಗಳಿಗೆ ಭರವಸೆ ನೀಡಿದರು.

ಇಲ್ಲಿನ ಸಿ–ಡಾಕ್ ಕಚೇರಿಯಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಹಾಗೂ ನವೋದ್ಯಮಗಳ ಪ್ರತಿನಿಧಿಗಳ ಜೊತೆ ಸೋಮವಾರ ಸಂವಾದ ನಡೆಸಿದ ಸಚಿವರು, ನೀತಿಯಲ್ಲಿ ಯಾವ ಅಂಶಗಳನ್ನು ಅಳವಡಿಸಿಕೊಳ್ಳಬಹುದು ಎಂಬ ಬಗ್ಗೆ ಸಲಹೆ ನೀಡುವಂತೆ ಕೋರಿದರು.

ಸಿ–ಡಾಕ್ ಕೇಂದ್ರವು ಇಂಟರ್ನೆಟ್ ಆಫ್ ಥಿಂಗ್ಸ್‌ ಅಭಿವೃದ್ಧಿಗಾಗಿ ಸಿದ್ಧಪಡಿಸಿರುವ ಇಂಡಸ್ ಕಿಟ್‌ಗೆ ಚಾಲನೆ ನೀಡಿದರು. ಡ್ರೋನ್ ಸೇರಿದಂತೆ ಹಲವು ಸಾಧನಗಳಲ್ಲಿ ಈ ಕಿಟ್ ಬಳಕೆ ಮಾಡಬಹುದು ಎಂದು ಪ್ರಕಟಣೆ ಹೇಳಿದೆ. ಈ ಕಿಟ್‌ನ ತಂತ್ರಜ್ಞಾನವನ್ನು ನವೋದ್ಯಮಗಳಿಗೆ ನೀಡಿ, ಇದರ ವಾಣಿಜ್ಯಿಕ ಉತ್ಪಾದನೆಗೆ ಅವಕಾಶ ಕಲ್ಪಿಸಲು ಸಿ–ಡಾಕ್ ಸಿದ್ಧವಿದೆ.

ಇಂಟೆಲ್ ಕಂಪನಿಯ ಉಪಾಧ್ಯಕ್ಷ ಶ್ರೀನಿವಾಸಲಿಂಗಂ, ಎನ್‌ಎಕ್ಸ್‌ಪಿ ಸೆಮಿಕಂಡಕ್ಟರ್ಸ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸಂಜಯ್ ಗುಪ್ತ ಸೇರಿದಂತೆ ಉದ್ಯಮದ ಹಲವು ಪ್ರತಿನಿಧಿಗಳು ಸಂವಾದದಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು