ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದಿ ವ್ಯಾಪಾರಿ ಆತ್ಮನಿರ್ಭರ ಯೋಜನೆ: ಸಮನ್ವಯ ಅಧಿಕಾರಿಗಳ ನೇಮಕ

Last Updated 25 ಜೂನ್ 2020, 15:56 IST
ಅಕ್ಷರ ಗಾತ್ರ

ನವದೆಹಲಿ:ಬೀದಿ ವ್ಯಾಪಾರಿಗಳ ಆತ್ಮನಿರ್ಭರ ಯೋಜನೆ ಜಾರಿಗೊಳಿಸುವ ಕುರಿತು ಕೇಂದ್ರ ಸರ್ಕಾರವು ಸಮನ್ವಯ ಅಧಿಕಾರಿಗಳ ನಿಯೋಜನೆ ಮಾಡಿದೆ.

34ಹಿರಿಯ ಅಧಿಕಾರಿಗಳು ನೋಡಲ್‌ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು, ರಾಜ್ಯಗಳಲ್ಲಿಯೋಜನೆ ಜಾರಿಗೊಳಿಸಲು ಮತ್ತು ಮೇಲ್ವಿಚಾರಣೆ ನಡೆಸಲು ನೆರವಾಗಲಿದ್ದಾರೆ.ಜುಲೈ 1 ರಿಂದ ಈ ಯೋಜನೆ ಜಾರಿಗೆ ಬರಲಿದೆ. ಲಾಕ್‌ಡೌನ್‌ನಿಂದ ಜೀವನ ನಡೆಸಲು ಕಷ್ಟಪಡುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೈಗೆಟುಕುವ ದರದಲ್ಲಿ ಸಾಲ ನೀಡುವುದು ಇದರ ಮೂಲ ಉದ್ದೇಶವಾಗಿದೆ.

ವ್ಯಾಪಾರಿಗಳು ₹ 10 ಸಾವಿರದವರೆಗೆ ದುಡಿಯುವ ಬಂಡವಾಳ ಪಡೆಯಬಹುದಾಗಿದೆ. ಒಂದು ವರ್ಷದಲ್ಲಿ ಸಾಲ ಮರುಪಾವತಿ ಮಾಡಬೇಕಾಗುತ್ತದೆ. ವಾರ್ಷಿಕ ಶೇ 7ರ ಸಬ್ಸಿಡಿ ದರದಲ್ಲಿ ಸಾಲ ಸಿಗಲಿದೆ. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗಲಿದೆ. 50 ಲಕ್ಷಕ್ಕೂ ಅಧಿಕ ವ್ಯಾಪಾರಿಗಳಿಗೆ ಇದರಿಂದ ಪ್ರಯೋಜನ ಆಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT