ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಚ್ಯಂಕ 368 ಅಂಶ ಇಳಿಕೆ: ಬ್ಯಾಂಕಿಂಗ್‌ ಷೇರುಗಳಿಗೆ ನಷ್ಟ

Last Updated 28 ಜನವರಿ 2019, 20:27 IST
ಅಕ್ಷರ ಗಾತ್ರ

ಮುಂಬೈ: ಬ್ಯಾಂಕಿಂಗ್‌, ವಾಹನ ಮತ್ತು ಗ್ರಾಹಕ ಬಳಕೆ ವಸ್ತುಗಳ ಷೇರುಗಳು ಅತಿಯಾದ ಮಾರಾಟದ ಒತ್ತಡಕ್ಕೆ ಒಳಗಾದವು. ಇದರಿಂದ ಷೇರುಪೇಟೆಗಳಲ್ಲಿ ನಕಾರಾತ್ಮಕ ವಹಿವಾಟು ನಡೆಯಿತು.

ಮಧ್ಯಂತರ ಬಜೆಟ್‌ನಲ್ಲಿಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಕಾರಣಕ್ಕಾಗಿಯೂ ಚಂಚಲ ವಹಿವಾಟು ನಡೆಯಿತು ಎಂದು ತಜ್ಞರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸೂಚ್ಯಂಕ 368 ಅಂಶ ಇಳಿಕೆಯಾಗಿ 35,657 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಎನ್‌ಎಸ್‌ಇ) ನಿಫ್ಟಿ 119 ಅಂಶ ಇಳಿಕೆ ಕಂಡು 10,661 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT