ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಟೆಯಲ್ಲಿ ಹೆಚ್ಚಿದ ಮಾರಾಟದ ಒತ್ತಡ

Last Updated 21 ನವೆಂಬರ್ 2018, 17:25 IST
ಅಕ್ಷರ ಗಾತ್ರ

ಮುಂಬೈ: ಸತತ ಎರಡನೇ ವಹಿವಾಟು ಅವಧಿಯಲ್ಲಿಯೂ ದೇಶದ ಷೇರುಪೇಟೆಗಳಲ್ಲಿ ನಕಾರಾತ್ಮಕ ವಹಿವಾಟು ನಡೆಯಿತು.

ವಿದೇಶಿ ಸಾಂಸ್ಥಿಕ ಹೂಡಿಕೆದಾರು ಬುಧವಾರ ₹ 753 ಕೊಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಇದು ಸಹ ಸೂಚ್ಯಂಕವನ್ನು ಇಳಿಯುವಂತೆ ಮಾಡಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 275 ಅಂಶ ಇಳಿಕೆಯಾಗಿ 35,199 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಗೆ ಕಚ್ಚಾ ತೈಲ ಪೂರೈಕೆ ಹೆಚ್ಚಾಗುತ್ತಿದೆ.ಹೀಗಾಗಿ ದರವು ಒಂದು ವರ್ಷದ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಬ್ರೆಂಟ್‌ ಕಚ್ಚಾ ತೈಲ ದರ ಶೇ 6.92ರಷ್ಟು ಇಳಿಕೆ ಕಂಡು ಒಂದು ಬ್ಯಾರೆಲ್‌ಗೆ 62.17 ಡಾಲರ್‌ಗೆ ತಗ್ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT