ಮಂಗಳವಾರ, ಜನವರಿ 25, 2022
28 °C

ಮೂರನೇ ದಿನವೂ ಮುಂದುವರಿದ ಗೂಳಿ ಓಟ, ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಕುಸಿತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಮೂರನೇ ದಿನವೂ ಸಕಾರಾತ್ಮಕ ವಹಿವಾಟು ನಡೆಯಿತು. ಹಲವು ದೇಶಗಳಲ್ಲಿ ಓಮೈಕ್ರಾನ್‌ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಲೆಕ್ಕಿಸದೇ ಹೂಡಿಕೆದಾರರು ವಹಿವಾಟು ನಡೆಸಿದ್ದರಿಂದ ಜಾಗತಿಕ ಷೇರುಪೇಟೆಗಳು ಗಳಿಕೆ ಕಂಡುಕೊಂಡವು. ದೇಶಿ ಷೇರುಪೇಟೆಗಳೂ ಅದನ್ನು ಅನುಸರಿಸಿದವು ಎಂದು ತಜ್ಞರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 672 ಅಂಶ ಹೆಚ್ಚಾಗಿ 59,855 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಎರಡು ದಿನಗಳ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯವು ₹ 5.36 ಲಕ್ಷ ಕೋಟಿಯಷ್ಟು ಹೆಚ್ಚಾಗಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 180 ಅಂಶ ಹೆಚ್ಚಾಗಿ 17,805ಕ್ಕೆ ತಲುಪಿದೆ.

ಹಣಕಾಸು ಮತ್ತು ಗ್ರಾಹಕ ಬಳಕೆ ವಸ್ತುಗಳ ವಲಯದ ಕಂಪನಿ ಷೇರುಗಳ ಖರೀದಿ ಜೋರಾಗಿದ್ದುದು ಸೂಚ್ಯಂಕಗಳ ಏರಿಕೆಗೆ ಕಾರಣವಾಯಿತು. ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಹೊಸ ತಳಿ ಓಮೈಕ್ರಾನ್‌ನಿಂದ ಆರ್ಥಿಕ ಚೇತರಿಕೆಯ ಮೇಲೆ ತೀರಾ ಕೆಟ್ಟ ಪರಿಣಾಮ ಇರಲಿಕ್ಕಿಲ್ಲ ಎನ್ನುವ ವರದಿಗಳಿಂದಾಗಿ ಹೂಡಿಕೆದಾರರು ಸಕಾರಾತ್ಮಕವಾಗಿ ವಹಿವಾಟು ನಡೆಸಿದರು ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್‌ ನಾಯರ್ ಹೇಳಿದ್ದಾರೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು 30 ಪೈಸೆ ಕಡಿಮೆ ಆಗಿದ್ದು, ಒಂದು ಡಾಲರ್‌ಗೆ ₹ 74.58ರಂತೆ ವಿನಿಮಯಗೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು