ಬುಧವಾರ, ಸೆಪ್ಟೆಂಬರ್ 22, 2021
29 °C

ಷೇರುಪೇಟೆ: ಮೂರನೇ ದಿನವೂ ಸೂಚ್ಯಂಕ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ದೇಶದ ಷೇರುಪೇಟೆಗಳು ಸತತ ಮೂರನೇ ದಿನವೂ ಮಾರಾಟದ ಒತ್ತಡಕ್ಕೆ ಒಳಗಾಗಿ ಇಳಿಕೆ ಕಂಡಿವೆ.

ಕೊರೊನಾ ವೈರಾಣುವಿನ ಡೆಲ್ಟಾ ರೂಪಾಂತರಿ ತಳಿಯು ವೇಗವಾಗಿ ಹರಡುತ್ತಿರುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಮಂಗಳವಾರ ಮಾರಾಟದ ಒತ್ತಡ ಹೆಚ್ಚಾಯಿತು. ಇದು ದೇಶಿ ಷೇರುಪೇಟೆಗಳ ಮೇಲೆ ಪರಿಣಾಮ ಬೀರಿತು ಎಂದು ತಜ್ಞರು ಹೇಳಿದ್ದಾರೆ.

ಬ್ಯಾಂಕಿಂಗ್‌ ಮತ್ತು ಹಣಕಾಸು ವಲಯದ ಷೇರುಗಳು ಹೆಚ್ಚಿನ ನಷ್ಟ ಅನುಭವಿಸಿವೆ. ರೂಪಾಯಿ ಮೌಲ್ಯ ಹೆಚ್ಚಳ ಮತ್ತು ಗ್ರಾಹಕ ಬಳಕೆಯ ವಸ್ತುಗಳ ಕೆಲವು ಕಂಪನಿಗಳ ಷೇರುಗಳ ಖರೀದಿ ಜೋರಾಗಿದ್ದುದು ಸೂಚ್ಯಂಕ ಹೆಚ್ಚು ಕುಸಿಯದಂತೆ ನೋಡಿಕೊಂಡವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 355 ಅಂಶ ಇಳಿಕೆ ಕಂಡಿದ್ದರೆ, ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 120 ಅಂಶ ಇಳಿಕೆ ಆಗಿದೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 27 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 74.61ಕ್ಕೆ ತಲುಪಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.22ರಷ್ಟು ಹೆಚ್ಚಾಗಿ ಬ್ಯಾರಲ್‌ಗೆ 66.77 ಡಾಲರ್‌ಗಳಿಗೆ ಏರಿಕೆ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು