ಗುರುವಾರ , ಅಕ್ಟೋಬರ್ 1, 2020
27 °C

4ನೇ ದಿನವೂ ಷೇರುಪೇಟೆ ಸೂಚ್ಯಂಕ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಸತತ ನಾಲ್ಕನೇ ದಿನವೂ ಮುಂಬೈ ಷೇರುಪೇಟೆ ವಹಿವಾಟು ಏರಿಕೆಯೊಂದಿಗೆ ಮುಕ್ತಾಯವಾಗಿದೆ. ಎಚ್‌ಡಿಎಫ್‌ಸಿ ಬ್ಯಾಂಕ್‌, ಎಚ್‌ಡಿಎಫ್‌ಸಿ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್ ಷೇರುಗಳ ಗಳಿಕೆಯು ಸಕಾರಾತ್ಮಕ ವಹಿವಾಟಿಗೆ ಕಾರಣವಾಗಿವೆ.

ಡಾಲರ್‌ ಎದುರು ರೂಪಾಯಿ ಮೌಲ್ಯ ವೃದ್ಧಿ, ಕಂಪನಿಗಳ ತ್ರೈಮಾಸಿಕ ಫಲಿತಾಂಶ ಉತ್ತೇಜನಕಾರಿ ಆಗಿರುವುದು ಹಾಗೂ ವಿದೇಶಿ ಬಂಡವಾಳ ಒಳಹರಿವು ಸಹ ಹೂಡಿಕೆ ಚಟುವಟಿಕೆಯ ಮೇಲೆ ಪ್ರಭಾವ ಬೀರಿದೆ ಎಂದು ವರ್ತಕರು ಹೇಳಿದ್ದಾರೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸೂಚ್ಯಂಕ 38,556 ಅಂಶಗಳ ಗರಿಷ್ಠ ಮಟ್ಟಕ್ಕೆ ತಲುಪಿತ್ತು. ಆ ಬಳಿಕ ಗಳಿಕೆಗೆ ತುಸು ಕಡಿವಾಣ ಬಿತ್ತು. ಹೀಗಾಗಿ 225 ಅಂಶಗಳ ಏರಿಕೆಯೊಂದಿಗೆ 38,407 ಅಂಶಗಳಲ್ಲಿ ದಿನದ ವಹಿವಾಟು ಅಂತ್ಯವಾಯಿತು.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ 52 ಅಂಶ ಹೆಚ್ಚಾಗಿ 11,322 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಗರಿಷ್ಠ ಗಳಿಕೆ: ಆ್ಯಕ್ಸಿಸ್‌ ಬ್ಯಾಂಕ್‌ ಷೇರು ಶೇ 3.96ರಷ್ಟು ಗರಿಷ್ಠ ಏರಿಕೆ ಕಂಡಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.