ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸ ಎತ್ತರಕ್ಕೆ ಷೇರುಪೇಟೆ

ಎನ್‌ಡಿಎ ಸರ್ಕಾರದ ಮೇಲೆ ಹೂಡಿಕೆದಾರರ ವಿಶ್ವಾಸ
Last Updated 27 ಮೇ 2019, 17:54 IST
ಅಕ್ಷರ ಗಾತ್ರ

ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದರಿಂದ ಷೇರುಪೇಟೆಗಳಲ್ಲಿ ಬಂಡವಾಳ ಹೂಡಿಕೆ ಚಟುವಟಿಕೆಯನ್ನು ಹೆಚ್ಚಿಸಿದೆ. ಸೋಮವಾರದ ವಹಿವಾಟಿನಲ್ಲಿ ಷೇರುಪೇಟೆ ಸೂಚ್ಯಂಕಗಳು ಹೊಸ ಎತ್ತರಕ್ಕೆ ಜಿಗಿದಿವೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 249 ಅಂಶಗಳಷ್ಟು ಏರಿಕೆಯಾಗಿ ಸಾರ್ವಕಾಲಿಕ ದಾಖಲೆ ಮಟ್ಟವಾದ 39,683 ಅಂಶಗಳಿಗೆ ತಲುಪಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 81 ಅಂಶ ಹೆಚ್ಚಾಗಿ ಹೊಸ ಎತ್ತರವಾದ 11,924 ಅಂಶಗಳಿಗೆ ಏರಿಕೆ ಕಂಡಿತು.

ಅಮೆರಿಕ ಮತ್ತು ಚೀನಾ ನಡುವಣ ವಾಣಿಜ್ಯ ಸಂಘರ್ಷವು ಜಾಗತಿಕ ಮಾರುಕಟ್ಟೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಭಾರತದ ಮೇಲೆ
ಹೆಚ್ಚಿನ ಪರಿಣಾಮ ಬೀರಲಾರದು. ಬಿಜೆಪಿ ನೇತೃತ್ವದ ಎನ್‌ಡಿಎ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರಲಿರುವುದೇ ಪೇಟೆಯ ವಹಿವಾಟಿನ ಮೇಲೆ ಹೆಚ್ಚು ಪ್ರಭಾವ ಬೀರಲಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT