ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಷೇರುಪೇಟೆ: ಹೊಸ ಎತ್ತರಕ್ಕೆ ಜಿಗಿದ ಸೂಚ್ಯಂಕಗಳು

Published 4 ಜುಲೈ 2024, 15:09 IST
Last Updated 4 ಜುಲೈ 2024, 15:09 IST
ಅಕ್ಷರ ಗಾತ್ರ

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ ಹಾಗೂ ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ ಹೊಸ ಎತ್ತರಕ್ಕೆ ಜಿಗಿದಿವೆ. 

ಐಸಿಐಸಿಐ ಬ್ಯಾಂಕ್‌, ಇನ್ಫೊಸಿಸ್‌, ಟಿಸಿಎಸ್‌ ಷೇರುಗಳ ಖರೀದಿ ಭರಾಟೆಯು ಸೂಚ್ಯಂಕಗಳ ಏರಿಕೆಗೆ ನೆರವಾಯಿತು. 

ಸೆನ್ಸೆಕ್ಸ್‌ 62 ಅಂಶ ಏರಿಕೆ ಕಂಡು 80,049 ಅಂಶಗಳಲ್ಲಿ ಸ್ಥಿರಗೊಂಡಿತು. ಇಂಟ್ರಾಡೇನಲ್ಲಿ 80,392 ಅಂಶ ಏರಿಕೆ ಕಂಡಿತ್ತು.  

ನಿಫ್ಟಿ 15 ಅಂಶ ಏರಿಕೆ ಕಂಡು 24,302 ಅಂಶಗಳಲ್ಲಿ ವಹಿವಾಟನ್ನು ಮುಕ್ತಾಯಗೊಳಿಸಿತು. 

ಬಿಎಸ್‌ಇಯಲ್ಲಿ ನೋಂದಾಯಿತ ಕಂಪನಿಗಳ ಮಾರುಕಟ್ಟೆ ಮೌಲ್ಯ ₹447 ಲಕ್ಷ ಕೋಟಿ ದಾಟಿದೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಕಂಪನಿಗಳ ಲಾಭದಲ್ಲಿ ಏರಿಕೆಯಾಗುವ ನಿರೀಕ್ಷೆಯಿದೆ. ಅಮೆರಿಕದಲ್ಲಿ ಚಿಲ್ಲರೆ ಹಣದುಬ್ಬರ ಇಳಿಕೆಯಾಗಿದೆ. ಹತ್ತು ವರ್ಷಗಳ ಕಾಲಾವಧಿಯ ಅಮೆರಿಕದ ಬಾಂಡ್‌ ಗಳಿಕೆಯಲ್ಲಿ ನಿರೀಕ್ಷೆಗೂ ಮೀರಿ ಇಳಿಕೆಯಾಗಿದೆ. ಇದರಿಂದ ಐ.ಟಿ ಮತ್ತು ಫಾರ್ಮಾ ವಲಯದ ಷೇರುಗಳು ಏರಿಕೆ ಕಂಡಿವೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. 

ಸೆನ್ಸೆಕ್ಸ್ ಗುಚ್ಛದಲ್ಲಿನ ಎಚ್‌ಸಿಎಲ್‌ ಟೆಕ್ನಾಲಜೀಸ್‌, ಐಸಿಐಸಿಐ ಬ್ಯಾಂಕ್‌, ಟಾಟಾ ಮೋಟರ್ಸ್‌, ಸನ್‌ ಫಾರ್ಮಾ, ಟಿಸಿಎಸ್‌, ಇನ್ಫೊಸಿಸ್‌, ಕೋಟಕ್‌ ಮಹೀಂದ್ರ ಬ್ಯಾಂಕ್‌, ಮಹೀಂದ್ರ ಆ್ಯಂಡ್‌ ಮಹೀಂದ್ರ ಕಂಪನಿಯ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ಎಚ್‌ಡಿಎಫ್‌ಸಿ, ಬಜಾಜ್‌ ಫಿನ್‌ಸರ್ವ್‌, ಎಲ್‌ ಆ್ಯಂಡ್‌ ಟಿ, ಟಿಕ್‌ ಮಹೀಂದ್ರ, ಅಲ್ಟ್ರಾಟೆಕ್‌ ಸಿಮೆಂಟ್‌, ಇಂಡಸ್‌ಇಂಡ್‌ ಬ್ಯಾಂಕ್‌ನ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.

ಬುಧವಾರದ ವಹಿವಾಟಿನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹5,483 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ಜಪಾನ್‌ ಷೇರುಪೇಟೆ ಸೂಚ್ಯಂಕ ನಿಕ್ಕಿ 225 ಅಂಶ ಏರಿಕೆ ಕಂಡು 40,913 ಅಂಶಗಳಲ್ಲಿ ವಹಿವಾಟನ್ನು ಮುಕ್ತಾಯಗೊಳಿಸಿದ್ದು, ಹೊಸ ದಾಖಲೆ ಬರೆದಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT