ಮುಂಬೈ : ಅಮೆರಿಕದ ಬ್ಯಾಂಕಿಂಗ್ ವಲಯದ ಬಿಕ್ಕಟ್ಟು ಜಾಗತಿಕ ಷೇರುಪೇಟೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಇದರಿಂದಾಗಿ ದೇಶದಲ್ಲಿ ಹಣಕಾಸು, ಐ.ಟಿ ಮತ್ತು ಬಂಡವಾಳ ಸರಕುಗಳ ಷೇರುಗಳು ಮಾರಾಟದ ಒತ್ತಡಕ್ಕೆ ಒಳಗಾಗಿ ಷೇರುಪೇಟೆಗಳು ಸೋಮವಾರ ಇಳಿಕೆ ಕಾಣುವಂತಾಯಿತು.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 360 ಅಂಶ ಇಳಿಕೆ ಕಂಡರೆ, ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 17 ಸಾವಿರಕ್ಕಿಂತ ಕೆಳಕ್ಕೆ ಇಳಿಯಿತು.
ಜಾಗತಿಕ ಹಣಕಾಸು ವ್ಯವಸ್ಥೆಯಲ್ಲಿನ ಬಿಕ್ಕಟ್ಟು ಹೂಡಿಕೆದಾರರನ್ನು ಷೇರುಪೇಟೆಯಿಂದ ದೂರ ಸರಿಯುವಂತೆ ಮಾಡಿತು ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಸೋಮವಾರ ₹ 2,545 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.