ಭಾನುವಾರ, ಆಗಸ್ಟ್ 1, 2021
22 °C

ರಿಲಯನ್ಸ್‌, ಎಚ್‌ಡಿಎಫ್‌ಸಿ ಬ್ಯಾಂಕ್ ಷೇರು ಗಳಿಕೆ: ಸೂಚ್ಯಂಕ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ದೇಶದ ಷೇರುಪೇಟೆಗಳ ವಹಿವಾಟು  ಸೋಮವಾರ ನಾಲ್ಕು ತಿಂಗಳ ಗರಿಷ್ಠ ಮಟ್ಟಕ್ಕೆ ತಲುಪಿತು.

ಕೆಲವು ನಿರ್ದಿಷ್ಟ ಷೇರುಗಳ ಬೆಲೆಯಲ್ಲಿ ಆಗಿರುವ ವ್ಯತ್ಯಾಸ ಮತ್ತು ಭಾರತ–ಚೀನಾ ಗಡಿಯಲ್ಲಿನ ಬಿಕ್ಕಟ್ಟು ಶಮನಗೊಳ್ಳುವ ಸೂಚನೆಯಿಂದಾಗಿ ಸಕಾರಾತ್ಮಕ ವಹಿವಾಟು ನಡೆಯಿತು ಎಂದು ವಹಿವಾಟುದಾರರು ಹೇಳಿದ್ದಾರೆ.

ಸತತ ನಾಲ್ಕನೇ ವಹಿವಾಟಿನ ದಿನವೂ ಸೂಚ್ಯಂಕಗಳು ಏರಿಕೆ ಕಂಡವು. ‌ರಿಲಯನ್ಸ್‌ ಇಂಡಸ್ಟ್ರೀಸ್‌, ಎಚ್‌ಡಿಎಫ್‌ಸಿ ಬ್ಯಾಂಕ್ ಷೇರುಗಳ ಮೌಲ್ಯದಲ್ಲಿನ ಏರಿಕೆಯು ದೇಶದ ಷೇರುಪೇಟೆಗಳಲ್ಲಿ ಸೋಮವಾರ ಸಕಾರಾತ್ಮಕ ವಹಿವಾಟು ನಡೆಯುವಂತೆ ಮಾಡಿತು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕವು ದಿನದ ವಹಿವಾಟಿನಲ್ಲಿ 36,661 ಅಂಶಗಳ  ಗರಿಷ್ಠ ಮಟ್ಟ ತಲುಪಿತ್ತು. ವಹಿವಾಟಿನ ಅಂತ್ಯದ ವೇಳೆಗೆ ಸೂಚ್ಯಂಕ 466 ಅಂಶ ಹೆಚ್ಚಾಗಿ 36,487 ಗಳಿಗೆ ತಲುಪಿತು.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 156 ಅಂಶ ಹೆಚ್ಚಾಗಿ 10,763 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಗರಿಷ್ಠ ಗಳಿಕೆ: ದಿನದ ವಹಿವಾಟಿನಲ್ಲಿ ಮಹೀಂದ್ರಾ ಆ್ಯಂಡ್‌ ಮಹೀಂದ್ರಾ ಷೇರು ಬೆಲೆ ಶೇ 7ರಷ್ಟು ಹೆಚ್ಚಾಗಿದೆ. ಬಜಾಜ್‌ ಫೈನಾನ್ಸ್, ರಿಲಯನ್ಸ್‌ ಇಂಡಸ್ಟ್ರೀಸ್‌, ಮಾರುತಿ, ಟಿಸಿಎಸ್‌, ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಟಾಟಾ ಸ್ಟೀಲ್‌ ಷೇರುಗಳ ಬೆಲೆಯೂ ಹೆಚ್ಚಾಗಿದೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 2 ಪೈಸೆ ಇಳಿಕೆ ಕಂಡು ಒಂದು ಡಾಲರ್‌ಗೆ ₹ 74.68ರಂತೆ ವಿನಿಮಯಗೊಂಡಿತು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು