ಮುಂಬೈ: ದೇಶೀಯ ಷೇರು ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶುಕ್ರವಾರದ ಆರಂಭಿಕ ವಹಿವಾಟಿನಲ್ಲೇ ಸಾರ್ವಕಾಲಿಕ ದಾಖಲೆ ಮಟ್ಟ ತಲುಪಿವೆ. ಏಷ್ಯಾ ಮಾರುಕಟ್ಟೆಗಳಲ್ಲಿ ಧನಾತ್ಮಕ ಪ್ರವೃತ್ತಿ ಮತ್ತು ವಿದೇಶಿ ಬಂಡವಾಳ ಒಳಹರಿವು ಷೇರುಪೇಟೆ ಮೇಲೆ ಪರಿಣಾಮ ಬೀರಿದೆ.
30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 502.42 ಅಂಶಗಳಷ್ಟು ಜಿಗಿದು ಸಾರ್ವಕಾಲಿಕ ಗರಿಷ್ಠ ಮಟ್ಟ 82,637.03ರಲ್ಲಿ ವಹಿವಾಟು ಆರಂಭಿಸಿದರೆ, ಎನ್‌ಎಸ್‌ಇ ನಿಫ್ಟಿ 105.7 ಅಂಶಗಳಷ್ಟು ಏರಿಕೆ ಕಂಡು ಹೊಸ ದಾಖಲೆಯ 25,257.65ರಲ್ಲಿ ವಹಿವಾಟು ಆರಂಭಿಸಿತು,
ಸೆನ್ಸೆಕ್ಸ್ ವ್ಯಾಪ್ತಿಯ ಸಂಸ್ಥೆಗಳಾದ ಬಜಾಜ್ ಫಿನ್‌ಸರ್ವ್, ಎಚ್‌ಡಿಎಫ್‌ಸಿ ಬ್ಯಾಂಕ್, ಟೈಟಾನ್, ಬಜಾಜ್ ಫೈನಾನ್ಸ್, ಎನ್‌ಟಿಪಿಸಿ, ಪವರ್ ಗ್ರಿಡ್, ಏಷ್ಯನ್ ಪೇಂಟ್ಸ್ ಮತ್ತು ಎಚ್‌ಸಿಎಲ್ ಟೆಕ್ನಾಲಜೀಸ್ ಅತಿ ಹೆಚ್ಚು ಲಾಭ ಗಳಿಸಿದ ಷೇರುಗಳಾಗಿವೆ.
ಟಾಟಾ ಮೋಟಾರ್ಸ್ ಮತ್ತು ಸನ್ ಫಾರ್ಮಾ ನಷ್ಟ ಅನುಭವಿಸಿವೆ.
ಏಷ್ಯಾದ ಷೇರುಪೇಟೆಗಳಾದ ಸೋಲ್, ಟೋಕಿಯೊ, ಶಾಂಘೈ ಮತ್ತು ಹಾಂಗ್ ಕಾಂಗ್ ಲಾಭದೊಂದಿಗೆ ವಹಿವಾಟು ನಡೆಸುತ್ತಿವೆ.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು(ಎಫ್‌ಐಐ) ಗುರುವಾರ ₹3,259.56 ಕೋಟಿ ಹೂಡಿಕೆ ಮಾಡಿದ್ದಾರೆ ಎಂಬುದು ಷೇರುಪೇಟೆ ಅಂಕಿ ಅಂಶದಿಂದ ತಿಳಿದುಬಂದಿದೆ.
ದೇಶೀಯ ಸಾಂಸ್ಥಿಕ ಹೂಡಿಕೆದಾರರು(ಎಫ್‌ಐಐ) ಹೂಡಿಕೆದಾರರು ₹2,690.85 ಕೋಟಿ ಹೂಡಿಕೆ ಮಾಡಿದ್ದಾರೆ.