ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಷೇರುಪೇಟೆ: ಸೆನ್ಸೆಕ್ಸ್‌ 443 ಅಂಶ ಏರಿಕೆ

Published 1 ಜುಲೈ 2024, 15:52 IST
Last Updated 1 ಜುಲೈ 2024, 15:52 IST
ಅಕ್ಷರ ಗಾತ್ರ

ಮುಂಬೈ: ಬ್ಯಾಂಕಿಂಗ್‌, ಐ.ಟಿ ಷೇರುಗಳ ಖರೀದಿಯಿಂದ ಸೋಮವಾರ ಷೇರು ಸೂಚ್ಯಂಕಗಳು ಏರಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಸೆನ್ಸೆಕ್ಸ್‌ ದಿನದ ವಹಿವಾಟಿನಲ್ಲಿ ಗರಿಷ್ಠ 79,561ಕ್ಕೆ ಏರಿಕೆಯಾಗಿತ್ತು. 79,476 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿ 443 ಅಂಶಗಳ ಏರಿಕೆ ದಾಖಲಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 131 ಅಂಶ ಹೆಚ್ಚಳವಾಗಿ 24,141ಕ್ಕೆ ಸ್ಥಿರಗೊಂಡಿತು. ವಹಿವಾಟಿನ ವೇಳೆ 24,164ಕ್ಕೆ ಮುಟ್ಟಿತ್ತು. 

ಷೇರು ಸೂಚ್ಯಂಕಗಳ ಏರಿಕೆಯಿಂದ ಬಿಎಸ್‌ಇ ನೊಂದಾಯಿತ ಕಂಪನಿಗಳ ಮಾರುಕಟ್ಟೆ ಮೌಲ್ಯವು ಸಾರ್ವಕಾಲಿಕ ಗರಿಷ್ಠ ₹443 ಲಕ್ಷ ಕೋಟಿಗೆ ಏರಿಕೆಯಾಗಿದೆ.

ಸೆನ್ಸೆಕ್ಸ್‌ ಗುಚ್ಛದಲ್ಲಿ ಟೆಕ್‌ ಮಹೀಂದ್ರಾ, ಅಲ್ಟ್ರಾಟೆಕ್‌ ಸಿಮೆಂಟ್‌, ಬಜಾಜ್‌ ಫೈನಾನ್ಸ್‌, ಹಿಂದುಸ್ತಾನ್‌ ಯೂನಿಲಿವರ್‌, ಟಿಸಿಎಸ್‌, ಜೆಎಸ್‌ಡಬ್ಲ್ಯು ಸ್ಟೀಲ್‌, ಇನ್ಫೊಸಿಸ್‌, ಎಚ್‌ಡಿಎಫ್‌ಸಿ ಬ್ಯಾಂಕ್‌, ಟಾಟಾ ಮೋಟರ್ಸ್‌ ಮತ್ತು ಐಸಿಐಸಿಐ ಬ್ಯಾಂಕ್‌ ಗಳಿಕೆ ಕಂಡಿವೆ.

ಎನ್‌ಟಿಪಿಸಿ, ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಲಾರ್ಸೆನ್‌ ಆ್ಯಂಡ್‌ ಟೊಬ್ರೊ, ಸನ್‌ ಫಾರ್ಮಾ, ಇಂಡಸ್‌ಇಂಡ್‌ ಬ್ಯಾಂಕ್‌ ಮತ್ತು ಎಕ್ಸಿಸ್‌ ಬ್ಯಾಂಕ್ ಷೇರಿನ ಮೌಲ್ಯ ಇಳಿಕೆಯಾಗಿದೆ.

ಜಾಗತಿಕ ಬ್ರೆಂಟ್‌ ಕಚ್ಚಾ ತೈಲದ ಬೆಲೆಯು ಶೇ 0.51ರಷ್ಟು ಹೆಚ್ಚಳವಾಗಿದ್ದು, ಪ್ರತಿ ಬ್ಯಾರೆಲ್‌ 85.43 ಡಾಲರ್‌ಗೆ ಮುಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT