ಮುಂಬೈ: ಅಮೆರಿಕದ ಕೇಂದ್ರೀಯ ಬ್ಯಾಂಕ್ ಆದ ಫೆಡರಲ್ ರಿಸರ್ವ್ ನಾಲ್ಕು ವರ್ಷದ ಬಳಿಕ ಶೇ 0.50ರಷ್ಟು ಬಡ್ಡಿದರ ಕಡಿತಗೊಳಿಸುವುದರಿಂದ ದೇಶದ ಷೇರುಪೇಟೆಯಲ್ಲಿ ಗುರುವಾರ ಸಕಾರಾತ್ಮಕ ವಹಿವಾಟು ನಡೆಯಿತು.
ಮುಂಬೈ ಷೇರುಪೇಟೆ ಸೂಚ್ಯಂಕ 236 ಅಂಶ ಏರಿಕೆ ಕಂಡು 83,184 ಅಂಶಗಳಲ್ಲಿ ಸ್ಥಿರಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 38 ಅಂಶ ಏರಿಕೆ ಕಂಡು 25,415 ಅಂಶಗಳಲ್ಲಿ ವಹಿವಾಟನ್ನು ಮುಕ್ತಾಯಗೊಳಿಸಿತು.