ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂಡಿಕೆದಾರರ ಸಂಪತ್ತು ₹ 6.39 ಲಕ್ಷ ಕೋಟಿ ವೃದ್ಧಿ

Last Updated 9 ಜನವರಿ 2021, 14:12 IST
ಅಕ್ಷರ ಗಾತ್ರ

ಬೆಂಗಳೂರು: ದೇಶದ ಷೇರುಪೇಟೆಗಳಲ್ಲಿ ಸದ್ಯ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ವಹಿವಾಟು ನಡೆಯುತ್ತಿದೆ. ವಾರದ ವಹಿವಾಟು ಸಕಾರಾತ್ಮಕವಾಗಿ ಅಂತ್ಯಗೊಂಡಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ವಾರದ ವಹಿವಾಟಿನಲ್ಲಿ 913 ಅಂಶ ಏರಿಕೆ ಕಂಡಿದ್ದು, 48,782 ಅಂಶಗಳಿಗೆ ತಲುಪಿದೆ. ಇದರಿಂದ ಹೂಡಿಕೆದಾರರ ಸಂಪತ್ತು ಮೌಲ್ಯ ₹ 6.39 ಲಕ್ಷ ಕೋಟಿಗಳಷ್ಟು ವೃದ್ಧಿಯಾಗಿದ್ದು, ಒಟ್ಟಾರೆ ಮಾರುಕಟ್ಟೆ ಬಂಡವಾಳವು ದಾಖಲೆಯ ₹ 195.66 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 329 ಅಂಶ ಹೆಚ್ಚಾಗಿ 14,347 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

2020ರಲ್ಲಿ ಬಿಎಸ್‌ಇ ಸೂಚ್ಯಂಕ ಶೇ 15.7ರಷ್ಟು ಗಳಿಕೆ ಕಂಡುಕೊಂಡಿದೆ. ಹೂಡಿಕೆದಾರರ ಸಂಪತ್ತು ₹ 32.49 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT