ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆಯಲ್ಲಿ ಏರಿಳಿತದ ವಹಿವಾಟು

Last Updated 8 ಏಪ್ರಿಲ್ 2019, 17:11 IST
ಅಕ್ಷರ ಗಾತ್ರ

‌ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸೋಮವಾರ ಚಂಚಲ ವಹಿವಾಟು ನಡೆದು, ನಷ್ಟದಲ್ಲಿ ಅಂತ್ಯಕಂಡಿತು.

4ನೇ ತ್ರೈಮಾಸಿಕದಲ್ಲಿ ಕಂಪನಿಗಳ ಆರ್ಥಿಕ ಸಾಧನೆ ಪ್ರಕಟವಾಗಬೇಕಿರುವುದರಿಂದ ಹೂಡಿಕೆದಾರರು ಎಚ್ಚರಿಕೆಯಿಂದ ವಹಿವಾಟು ನಡೆಸಿದರು. ಇದರ ಜತೆಗೆ ಚುನಾವಣೆಯೂ ವಿದ್ಯಮಾನಗಳೂ ಪ್ರಭಾವ ಬೀರಿತು ಎಂದು ತಜ್ಞರು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 162 ಅಂಶ ಇಳಿಕೆಯಾಗಿ 38,700 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 61 ಅಂಶ ಕಡಿಮೆಯಾಗಿ 11,604 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ರೂಪಾಯಿ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 44 ಪೈಸೆ ಇಳಿಕೆಯಾಗಿ ಒಂದು ಡಾಲರ್‌ಗೆ ₹ 69.67ರಂತೆ ವಿನಿಮಯಗೊಂಡಿತು. ಮೂರು ವಹಿವಾಟು ಅವಧಿಯಲ್ಲಿ ರೂಪಾಯಿ 126 ಪೈಸೆಗಳಷ್ಟು ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT