ಮುಂಬೈ: ಲೋಕಸಭಾ ಚುನಾವಣಾ ಫಲಿತಾಂಶದ ಅನಿಶ್ಚಿತತೆಯಿಂದಾಗಿ ಕುಸಿತ ಕಂಡಿದ್ದ ದೇಶದ ಷೇರು ಸೂಚ್ಯಂಕಗಳು ಶುಕ್ರವಾರ ಚೇತರಿಕೆಯ ಹಳಿಗೆ ಮರಳಿವೆ.

ಆದರೂ, ವಿದೇಶಿ ಸಾಂಸ್ಥಿಕ ಹೂಡಿಕೆದಾರರಿಂದ ಬಂಡವಾಳ ಹಿಂತೆಗೆತ ಮುಂದುವರಿದಿದೆ. ಇದರ ನಡುವೆಯೂ ದೇಶೀಯ ಹೂಡಿಕೆದಾರರು ದಿನದ ವಹಿವಾಟಿನಲ್ಲಿ ಅಲ್ಪ ಗಳಿಕೆ ಕಂಡಿದ್ದಾರೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

‘ವಿದೇಶದ ಮಾರುಕಟ್ಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆದಿರುವುದು ದೇಶೀಯ ಷೇರುಪೇಟೆಗಳ ಮೇಲೆ ಪರಿಣಾಮ ಬೀರಿದೆ’ ಎಂದು ಮೆಹ್ತಾ ಸೆಕ್ಯೂರಿಟೀಸ್ನ ಹಿರಿಯ ಉಪಾಧ್ಯಕ್ಷ (ಸಂಶೋಧನೆ) ಪ್ರಶಾಂತ್ ತಾಪ್ಸೆ ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 260 ಅಂಶ ಏರಿಕೆ ಕಂಡು, 72,644ರಲ್ಲಿ ಸ್ಥಿರಗೊಂಡಿತು. ದಿನದ ವಹಿವಾಟಿನಲ್ಲಿ 542 ಅಂಶ ಏರಿಕೆ ಕಂಡಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 97 ಅಂಶ ಏರಿಕೆ ಕಂಡು, 22,055ರಲ್ಲಿ ವಹಿವಾಟನ್ನು ಮುಕ್ತಾಯಗೊಳಿಸಿತು.

ಸೆನ್ಸೆಕ್ಸ್ ಗುಚ್ಛದಲ್ಲಿನ ಪವರ್ ಗ್ರಿಡ್, ಎನ್ಟಿಪಿಸಿ, ಜೆಎಸ್ಡಬ್ಲ್ಯು ಸ್ಟೀಲ್, ಏಷ್ಯನ್ ಪೇಂಟ್ಸ್, ಭಾರ್ತಿ ಏರ್ಟೆಲ್, ಹಿಂದುಸ್ತಾನ್ ಯೂನಿಲಿವರ್ ಹಾಗೂ ಟಾಟಾ ಮೋಟರ್ಸ್ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.

ಟಿಸಿಎಸ್, ಕೋಟಕ್ ಮಹೀಂದ್ರ ಬ್ಯಾಂಕ್, ಇನ್ಫೊಸಿಸ್, ವಿಪ್ರೊ, ಮಹೀಂದ್ರ ಆ್ಯಂಡ್ ಮಹೀಂದ್ರ, ಎಚ್ಡಿಎಫ್ಸಿ ಬ್ಯಾಂಕ್ನ ಷೇರಿನ ಮೌಲ್ಯ ಕುಸಿದಿದೆ.

ಸೋಲ್, ಟೋಕಿಯೊ, ಶಾಂಘೈ ಹಾಗೂ ಹಾಂಗ್ಕಾಂಗ್ ಮಾರುಕಟ್ಟೆಯಲ್ಲೂ ಸಕಾರಾತ್ಮಕ ವಹಿವಾಟು ನಡೆದಿದೆ. ಯುರೋಪ್ ಮಾರುಕಟ್ಟೆಗಳು ಗಳಿಕೆ ಕಂಡಿವೆ.

ಬ್ರೆಂಟ್ ಕಚ್ಚಾ ತೈಲದ ಬೆಲೆಯಲ್ಲಿ ಶೇ 0.41ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರೆಲ್ 84.22 ಡಾಲರ್ಗೆ ತಲುಪಿದೆ.

ಗುರುವಾರ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಒಟ್ಟು 6,994 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ ಎಂದು ಷೇರುಪೇಟೆಯ ಅಂಕಿಅಂಶಗಳು ತಿಳಿಸಿವೆ.

ಬಿಪಿಸಿಎಲ್ ಷೇರಿನ ಮೌಲ್ಯ ಏರಿಕೆ

ನವದೆಹಲಿ (ಪಿಟಿಐ): ಸರ್ಕಾರಿ ಸ್ವಾಮ್ಯದ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನ (ಬಿಪಿಸಿಎಲ್) ಷೇರಿನ ಮೌಲ್ಯದಲ್ಲಿ ಶೇ 4.50ರಷ್ಟು ಏರಿಕೆಯಾಗಿದೆ. ಬಿಎಸ್ಇಯಲ್ಲಿ ಷೇರಿನ ಮೌಲ್ಯ ಶೇ 4.44ರಷ್ಟು ಏರಿಕೆಯಾಗಿದ್ದು ಪ್ರತಿ ಷೇರಿನ ಬೆಲೆ ₹618.60ಕ್ಕೆ ತಲುಪಿದೆ. ವಹಿವಾಟಿನ ಒಂದು ಹಂತದಲ್ಲಿ ಶೇ 4.98ರಷ್ಟು ಏರಿಕೆಯಾಗಿತ್ತು. ಎನ್ಎಸ್ಇಯಲ್ಲಿ ಷೇರಿನ ಮೌಲ್ಯವು ಶೇ 4.50ರಷ್ಟು ಏರಿಕೆಯಾಗಿದ್ದು ಪ್ರತಿ ಷೇರಿನ ಬೆಲೆಯು ₹618.80 ಆಗಿದೆ. ಒಂದೇ ದಿನ ಕಂಪನಿಯ ಮಾರುಕಟ್ಟೆ ಮೌಲ್ಯಕ್ಕೆ (ಎಂ–ಕ್ಯಾಪ್) ₹5705 ಕೋಟಿ ಸೇರ್ಪಡೆಯಾಗಿದೆ. ಒಟ್ಟು ಎಂ–ಕ್ಯಾಪ್ ₹1.34 ಲಕ್ಷ ಕೋಟಿ ಮುಟ್ಟಿದೆ. 2023–24ರ ಪೂರ್ಣ ಆರ್ಥಿಕ ವರ್ಷದಲ್ಲಿ ಕಂಪನಿಯು ₹26858 ಕೋಟಿ ನಿವ್ವಳ ಲಾಭಗಳಿಸಿದೆ. ಪ್ರತಿ ಷೇರಿಗೆ ಲಾಭಾಂಶದ ರೂಪದಲ್ಲಿ ಉಚಿತವಾಗಿ ಒಂದು ಷೇರು ವಿತರಿಸಲು ಕಂಪನಿಯ ಆಡಳಿತ ಮಂಡಳಿ ಅನುಮೋದನೆ ನೀಡಿದೆ. ಹಾಗಾಗಿ ಷೇರಿನ ಮೌಲ್ಯದಲ್ಲಿ ಹೆಚ್ಚಳವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.