ಸೋಮವಾರ, ಜೂನ್ 27, 2022
24 °C

ಹೊಸ ಎತ್ತರಕ್ಕೆ ನಿಫ್ಟಿ, ಸೆನ್ಸೆಕ್ಸ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಕೋವಿಡ್‌ ಪ್ರಕರಣಗಳ ಸಂಖ್ಯೆ ಇಳಿಕೆ ಆಗುತ್ತಿರುವುದರಿಂದ ಹಲವು ರಾಜ್ಯಗಳು ಲಾಕ್‌ಡೌನ್‌ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿರುವುದು ಹೂಡಿಕೆದಾರರ ಉತ್ಸಾಹ ಹೆಚ್ಚಿಸಿದೆ. ಇದರ ಪರಿಣಾಮವಾಗಿ, ದೇಶದ ಷೇರುಪೇಟೆ ಸೂಚ್ಯಂಕಗಳು ಸೋಮವಾರ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯಗೊಳಿಸಿವೆ.

ಇಂಧನ, ಐ.ಟಿ. ಮತ್ತು ಬ್ಯಾಂಕ್‌ ಷೇರುಗಳ ಉತ್ತಮ ಗಳಿಕೆಯು ಸಕಾರಾತ್ಮಕ ವಹಿವಾಟಿಗೆ ಉತ್ತೇಜನ ನೀಡಿದವು. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 228 ಅಂಶ ಹೆಚ್ಚಾಗಿ ಹೊಸ ದಾಖಲೆಯಾದ 52,328 ಅಂಶಗಳಿಗೆ ತಲುಪಿತು. ಬಿಎಸ್‌ಇನಲ್ಲಿ ನೋಂದಾಯಿತ ಕಂಪನಿಗಳ ಒಟ್ಟಾರೆ ಬಂಡವಾಳ ಮೌಲ್ಯವು ದಾಖಲೆಯ ₹ 229 ಲಕ್ಷ ಕೋಟಿಗಳಿಗೆ ತಲುಪಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 81 ಅಂಶ ಹೆಚ್ಚಾಗಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ 15,751 ಅಂಶಗಳಿಗೆ ತಲುಪಿತು.

ಲಾಕ್‌ಡೌನ್‌ ನಿರ್ಬಂಧಗಳು ಇನ್ನಷ್ಟು ಸಡಿಲವಾಗುವ ನಿರೀಕ್ಷೆ ಮತ್ತು ಕೇಂದ್ರದ ಕೋವಿಡ್‌–19 ಲಸಿಕೆ ನೀತಿಯು ಷೇರುಪೇಟೆಯಲ್ಲಿ ಹೊಸ ವಿಶ್ವಾಸವನ್ನು ತುಂಬಿತು ಎಂದು ಜಿಯೋಜಿತ್‌ ಹಣಕಾಸು ಸೇವೆಗಳ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಹೇಳಿದ್ದಾರೆ. ಬಿಎಸ್‌ಇ ಮಿಡ್‌ ಮತ್ತು ಸ್ಮಾಲ್‌ ಕ್ಯಾಪ್‌ ಸೂಚ್ಯಂಕಗಳು ಶೇ 1.38ರವರೆಗೂ ಏರಿಕೆ ಕಂಡವು.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 19 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 72.80ರಂತೆ ವಿನಿಮಯಗೊಂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು