ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಕಾಲಿಕ ಗರಿಷ್ಠಮಟ್ಟಕ್ಕೆ ಷೇರು ಸೂಚ್ಯಂಕಗಳು

Published 4 ಮಾರ್ಚ್ 2024, 15:03 IST
Last Updated 4 ಮಾರ್ಚ್ 2024, 15:03 IST
ಅಕ್ಷರ ಗಾತ್ರ

ಮುಂಬೈ: ದಿನದ ವಹಿವಾಟಿನಲ್ಲಿ ಇಂಧನ ಮತ್ತು ಬ್ಯಾಂಕ್‌ ಷೇರುಗಳು ಗಳಿಕೆ ಕಂಡಿದ್ದರಿಂದ ಷೇರು ಸೂಚ್ಯಂಕಗಳು ಸೋಮವಾರ ಗರಿಷ್ಠ ಮಟ್ಟ ದಾಖಲಿಸಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ (ಬಿಎಸ್‌ಇ) ಸೆನ್ಸೆಕ್ಸ್‌ 66 ಅಂಶ ಏರಿಕೆಯಾಗಿ 73,872ಕ್ಕೆ ಸ್ಥಿರಗೊಂಡಿತು. ವಹಿವಾಟಿನ ವೇಳೆ 73,990 ಅಂಶಕ್ಕೆ ಜಿಗಿತ ಕಂಡಿತ್ತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 27 ಅಂಶ ಹೆಚ್ಚಳವಾಗಿ 22,405ಕ್ಕೆ ಕೊನೆಗೊಂಡಿತು. ವಹಿವಾಟಿನ ವೇಳೆ ಸೂಚ್ಯಂಕವು 22,440 ಅಂಶಕ್ಕೆ ಮುಟ್ಟಿತ್ತು. ಇದು ಸಾರ್ವಕಾಲಿಕ ಗರಿಷ್ಠ ಮಟ್ಟವಾಗಿದೆ.

ಎನ್‌ಟಿಪಿಸಿ, ಪವರ್‌ಗ್ರಿಡ್‌, ರಿಲಯನ್ಸ್‌ ಇಂಡಸ್ಟ್ರೀಸ್‌, ಬಜಾಜ್‌ ಫಿನ್‌ಸರ್ವ್‌, ಎಕ್ಸಿಸ್‌ ಬ್ಯಾಂಕ್‌, ಟೆಕ್‌ ಮಹೀಂದ್ರ, ಐಸಿಐಸಿಐ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌ ಮತ್ತು ಇಂಡಸ್‌ಇಂಡ್‌ ಬ್ಯಾಂಕ್‌ ಗಳಿಕೆ ಕಂಡಿವೆ. 

ಜೆಎಸ್‌ಡಬ್ಲ್ಯು ಸ್ಟೀಲ್‌, ಮಹೀಂದ್ರ ಆ್ಯಂಡ್‌ ಮಹೀಂದ್ರ, ಟಾಟಾ ಸ್ಟೀಲ್‌, ಅಲ್ಟ್ರಾಟೆಕ್‌ ಸಿಮೆಂಟ್‌, ಇನ್ಫೊಸಿಸ್‌ ಮತ್ತು ಟೈಟನ್‌ ಷೇರಿನ ಮೌಲ್ಯ ಇಳಿಕೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT