ಶನಿವಾರ, ಜನವರಿ 29, 2022
22 °C

ಮುಂಬೈ ಷೇರುಪೇಟೆ: ಸೆನ್ಸೆಕ್ಸ್‌ 621 ಅಂಶ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ನಾಲ್ಕು ದಿನಗಳಿಂದ ಏರುಗತಿಯಲ್ಲಿ ಸಾಗಿದ್ದ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್, ಗುರುವಾರದ ವಹಿವಾಟಿನಲ್ಲಿ 621 ಅಂಶ ಇಳಿಕೆ ದಾಖಲಿಸಿತು. ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಬಡ್ಡಿ ದರವನ್ನು ನಿರೀಕ್ಷೆಗಿಂತ ಮೊದಲೇ ಹೆಚ್ಚಿಸಲಿದೆ ಎಂದು ಸುದ್ದಿಯು ಸೂಚ್ಯಂಕದ ಇಳಿಕೆಗೆ ಒಂದು ಕಾರಣವಾಯಿತು.

ದಿನದ ಅಂತ್ಯಕ್ಕೆ ಸೆನ್ಸೆಕ್ಸ್ 59,601 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ಅದೇ ರೀತಿ, ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿ‍ಫ್ಟಿ 179 ಅಂಶ ಇಳಿಕೆ ಕಂಡು 17,745 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು.

‘ಹೂಡಿಕೆದಾರರು ಕೋವಿಡ್‌ ಪ್ರಕರಣಗಳು ತೀವ್ರವಾಗಿ ಹೆಚ್ಚಳ ಆಗುತ್ತಿರುವುದನ್ನು, ಕೋವಿಡ್‌ ಹರಡುವುದನ್ನು ತಡೆಯಲು ನಿರ್ಬಂಧಗಳನ್ನು ಜಾರಿಗೆ ತರುತ್ತಿರುವುದನ್ನು ಗಮನಿಸುತ್ತ ಇದ್ದಾರೆ. ಮುಂದಿನ ದಿನಗಳಲ್ಲಿ ಷೇರು ಮಾರುಕಟ್ಟೆಗಳಲ್ಲಿ ಅಸ್ಥಿರತೆ ಹೆಚ್ಚಾಗಬಹುದು’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ 81 ಡಾಲರ್‌ಗೆ ಹೆಚ್ಚಳ ಆಗಿದೆ. ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 4 ಪೈಸೆ ಇಳಿಕೆ ಆಗಿ, ₹ 74.42ಕ್ಕೆ ತಲುಪಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು