ಮುಂಬೈ: ಮುಂಬೈ ಷೇರುಪೇಟೆ ಮತ್ತು ರಾಷ್ಟ್ರೀಯ ಷೇರುಪೇಟೆಯ ಸಂವೇದಿ ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ ಗುರುವಾರ ವಹಿವಾಟು ಅಂತ್ಯಗೊಳಿಸಿವೆ. ಎಚ್‌ಡಿಎಫ್‌ಸಿ ಬ್ಯಾಂಕ್, ಎಲ್‌ಆ್ಯಂಡ್‌ಟಿ ಮತ್ತು ಎಚ್‌ಸಿಎಲ್ ಟೆಕ್ ಕಂಪನಿಗಳ ಗಳಿಕೆಯು ಸೂಚ್ಯಂಕಗಳ ಏರಿಕೆಗೆ ಕಾರಣವಾದವು.

ಸೆನ್ಸೆಕ್ಸ್ 254 ಅಂಶ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ ಮಟ್ಟವಾದ 53,158ಕ್ಕೆ ತಲುಪಿತು. ನಿಫ್ಟಿ 71 ಅಂಶ ಹೆಚ್ಚಾಗಿ ದಾಖಲೆಯ 15,924 ಅಂಶಗಳಿಗೆ ತಲುಪಿತು.

ಮೂರು ದಿನಗಳ ಸಕಾರಾತ್ಮಕ ವಹಿವಾಟಿನಿಂದಾಗಿ ಮುಂಬೈ ಷೇರುಪೇಟೆಯ ಹೂಡಿಕೆದಾರರ ಸಂಪತ್ತು ಮೌಲ್ಯವು ₹ 2.22 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದೆ. ಷೇರುಪೇಟೆಯ ಒಟ್ಟಾರೆ ಬಂಡವಾಳ ಮೌಲ್ಯ ₹ 233.86 ಲಕ್ಷ ಕೋಟಿಗಳಿಗೆ ತಲುಪಿದೆ.

ಏಷ್ಯಾದ ಮಾರುಕಟ್ಟೆಗಳಲ್ಲಿನ ಸಕಾರಾತ್ಮಕ ವಹಿವಾಟು ಹಾಗೂ ಮೊದಲ ತ್ರೈಮಾಸಿಕದಲ್ಲಿ ಐ.ಟಿ, ಹಣಕಾಸು ಮತ್ತು ಲೋಹ ವಲಯದ ಕಂಪನಿಗಳ ಉತ್ತಮ ಆರ್ಥಿಕ ಸಾಧನೆಯ ನಿರೀಕ್ಷೆಯಿಂದ ಆ ವಲಯದ ಕಂಪನಿಗಳ ಷೇರುಗಳ ಬೆಲೆ ಹೆಚ್ಚಾಗಿ ಸೂಚ್ಯಂಕಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿವೆ ಎಂದು ಜಿಯೋಜಿತ್ ಹಣಕಾಸು ಸೇವೆಗಳ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಬ್ರೆಂಟ್ ಕಚ್ಚಾ ತೈಲ ದರ ಶೇ 0.70ರಷ್ಟು ಇಳಿಕೆ ಆಗಿದ್ದು ಒಂದು ಬ್ಯಾರಲ್‌ಗೆ 74.24 ಡಾಲರ್‌ಗಳಿಗೆ ತಲುಪಿದೆ.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 5 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 74.54ರಂತೆ ವಿನಿಮಯಗೊಂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.