ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಫ್ಟಿ, ಸೆನ್ಸೆಕ್ಸ್ ಹೊಸ ದಾಖಲೆ

Last Updated 3 ಜೂನ್ 2021, 16:25 IST
ಅಕ್ಷರ ಗಾತ್ರ

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಹಾಗೂ ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ ಗುರುವಾರದ ವಹಿವಾಟಿನಲ್ಲಿ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ ತಲುಪಿದವು. ಬ್ಯಾಂಕಿಂಗ್, ಹಣಕಾಸು ಮತ್ತು ಮೂಲಸೌಕರ್ಯ ವಲಯದ ಷೇರುಗಳ ಖರೀದಿಯು ಜೋರಾಗಿ ನಡೆಯಿತು.

382 ಅಂಶ ಏರಿಕೆ ಕಂಡ ಸೆನ್ಸೆಕ್ಸ್, 52,232 ಅಂಶದಲ್ಲಿ ವಹಿವಾಟು ಕೊನೆಗೊಳಿಸಿತು. ಫೆಬ್ರುವರಿ 15ರಂದು ತಲುಪಿದ್ದ 52,154 ಅಂಶಗಳ ದಾಖಲೆಯ ಮಟ್ಟವನ್ನು ಮೀರಿತು. 114 ಅಂಶ ಜಿಗಿದ ನಿಫ್ಟಿ ದಾಖಲೆಯ 15,690 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ಸೆನ್ಸೆಕ್ಸ್‌ನಲ್ಲಿ ಟೈಟಾನ್‌ ಷೇರುಗಳು ಅತಿಹೆಚ್ಚಿನ ಗಳಿಕೆ ಕಂಡವು.

ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿಯ (ಎಂಪಿಸಿ) ಸಭೆಯ ತೀರ್ಮಾನಗಳು ಶುಕ್ರವಾರ ಪ್ರಕಟವಾಗಲಿವೆ. ಹಣದುಬ್ಬರದ ಮೇಲೆ ಒಂದು ಕಣ್ಣು ಇರಿಸಿ, ಆರ್‌ಬಿಐ ಹೊಂದಾಣಿಕೆಯ ನೀತಿಯನ್ನು ಮುಂದುವರಿಸಲಿದೆ ಎಂಬ ನಿರೀಕ್ಷೆ ಹೂಡಿಕೆದಾರರಿಗೆ ಇದೆ ಎಂದು ಎಲ್‌ಕೆಪಿ ಸೆಕ್ಯುರಿಟೀಸ್‌ನ ಸಂಶೋಧನಾ ಮುಖ್ಯಸ್ಥ ಎಸ್. ರಂಗನಾಥನ್ ಹೇಳಿದರು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯಲ್ಲಿ ಶೇ 0.18ರಷ್ಟು ಕಡಿಮೆ ಆಗಿದೆ. ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 71.22 ಡಾಲರ್‌ಗೆ ಮಾರಾಟವಾಗಿದೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ 18 ‍ಪೈಸೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT