ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಾಟದ ಒತ್ತಡ: ಸೆನ್ಸೆಕ್ಸ್‌, ನಿಫ್ಟಿ ಇಳಿಕೆ

ಬ್ಯಾಂಕಿಂಗ್‌, ಔಷಧ ವಲಯದ ಕಂಪನಿಗಳ ಷೇರು ಮೌಲ್ಯ ಇಳಿಕೆ
Last Updated 16 ನವೆಂಬರ್ 2021, 13:55 IST
ಅಕ್ಷರ ಗಾತ್ರ

ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌, ಐಸಿಐಸಿಐ ಬ್ಯಾಂಕ್‌ ಮತ್ತು ಎಸ್‌ಬಿಐ ಷೇರುಗಳು ಅತಿಯಾದ ಮಾರಾಟದ ಒತ್ತಡಕ್ಕೆ ಒಳಗಾಗಿದ್ದರಿಂದ ದೇಶದ ಷೇರುಪೇಟೆಗಳ ವಹಿವಾಟು ಇಳಿಕೆ ಕಂಡಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 396 ಅಂಶ ಇಳಿಕೆ ಕಂಡಿದ್ದು, 60,322 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 110 ಅಂಶ ಇಳಿಕೆಯಾಗಿ 17,999 ಅಂಶಗಳಿಗೆ ತಲುಪಿತು.

ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರು ಮೌಲ್ಯವು ಶೇ 2.51ರಷ್ಟು ಗರಿಷ್ಠ ಇಳಿಕೆ ಕಂಡಿದೆ. ಎಸ್‌ಬಿಐ ಷೇರು ಶೇ 2.31ರಷ್ಟು, ಅಲ್ಟ್ರಾಟೆಕ್‌ ಸಿಮೆಂಟ್‌ ಷೇರು ಶೇ 2.2ರಷ್ಟು, ಎನ್‌ಟಿಪಿಸಿ ಷೇರು ಶೇ 2.08ರಷ್ಟು ಮತ್ತು ಇಂಡಸ್‌ಇಂಡ್‌ ಷೇರು ಶೇ 1.8ರಷ್ಟು ಇಳಿಕೆ ಕಂಡಿವೆ.

ಬ್ಯಾಂಕಿಂಗ್‌ ಮತ್ತು ಔಷಧ ವಲಯದ ಷೇರುಗಳು ಅತಿಯಾದ ಮಾರಾಟದ ಒತ್ತಡಕ್ಕೆ ಒಳಗಾಗಿದ್ದರಿಂದ ದೇಶದ ಷೇರುಪೇಟೆಗಳು ಸಾಕಷ್ಟು ಏರಿಳಿತ ಕಂಡವು ಎಂದು ಜಿಯೋಜಿತ್‌ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಹೇಳಿದ್ದಾರೆ.

ರೂಪಾಯಿ ಮೌಲ್ಯ ವೃದ್ಧಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು 9 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 74.37ರಂತೆ ವಿನಿಮಯಗೊಂಡಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.72ರಷ್ಟು ಹೆಚ್ಚಾಗಿ ಒಂದು ಬ್ಯಾರಲ್‌ಗೆ 82.64 ಡಾಲರ್‌ಗಳಿಗೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT