ಗುರುವಾರ , ಮಾರ್ಚ್ 23, 2023
28 °C

ಉಡುಗಿದ ಉತ್ಸಾಹ: ಸೆನ್ಸೆಕ್ಸ್ 485 ಅಂಶ ಕುಸಿತ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಕೊರೊನಾ ಸೋಂಕಿನ ಡೆಲ್ಟಾ ರೂಪಾಂತರಿ ತಳಿಯು ಹಲವು ದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪತ್ತೆಯಾಗುತ್ತಿರುವುದು ಹಾಗೂ ಅಮೆರಿಕದ ಫೆಡರಲ್‌ ರಿಸರ್ವ್‌ ಬಡ್ಡಿ ದರ ಹೆಚ್ಚಿಸುವ ಪರವಾಗಿ ಮಾತನಾಡಿದ್ದು ಹೂಡಿಕೆದಾರರ ಉತ್ಸಾಹ ಉಡುಗಿಸಿದವು. ಇದರಿಂದಾಗಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು 485 ಅಂಶ ಇಳಿಕೆ ದಾಖಲಿಸಿತು.

ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 151 ಅಂಶ ಇಳಿಕೆ ಕಂಡಿತು. ‘ಜಗತ್ತಿನ ಬೇರೆ ಬೇರೆ ಕಡೆಗಳಿಂದ ನಕಾರಾತ್ಮಕ ಸುದ್ದಿಗಳು ಬಂದಿದ್ದು ದಲಾಲ್‌ ಸ್ಟ್ರೀಟ್‌ನಲ್ಲಿ ನಿರಾಸೆ ಕವಿಯಲು ಕಾರಣವಾಯಿತು’ ಎಂದು ಜಿಯೋಜಿತ್‌ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಬಿಎಸ್‌ಇ ಲೋಹ, ಬ್ಯಾಂಕ್, ಹಣಕಾಸು ಸೂಚ್ಯಂಕಗಳು ಕುಸಿತ ದಾಖಲಿಸಿದವು. ಬಿಎಸ್‌ಇ ಮಿಡ್‌ ಕ್ಯಾಪ್ ಹಾಗೂ ಸ್ಮಾಲ್ ಕ್ಯಾಪ್ ಸೂಚ್ಯಂಕಗಳು ಕೂಡ ಇಳಿಕೆ ಕಂಡವು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ 72.75 ಡಾಲರ್‌ಗೆ ಇಳಿಕೆ ಆಗಿದೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 9 ಪೈಸೆ ಕುಸಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು