ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೆ 60 ಸಾವಿರದ ಗಡಿ ದಾಟಿದ ಸೆನ್ಸೆಕ್ಸ್

Last Updated 5 ಜನವರಿ 2022, 14:12 IST
ಅಕ್ಷರ ಗಾತ್ರ

ಮುಂಬೈ: ಸತತ ನಾಲ್ಕನೆಯ ದಿನವೂ ಗಳಿಕೆಯ ಓಟ ಮುಂದುವರಿಸಿದ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್, ಮತ್ತೆ 60 ಸಾವಿರ ಅಂಶಗಳ ಗಡಿ ದಾಟಿದೆ. ಬ್ಯಾಂಕಿಂಗ್ ಮತ್ತು ಹಣಕಾಸು ವಲಯದ ಷೇರುಗಳ ಗಳಿಕೆಯ ಕಾರಣದಿಂದಾಗಿ ಸೂಚ್ಯಂಕ ಏರಿಕೆ ಕಂಡಿತು. ಆದರೆ, ಐ.ಟಿ. ವಲಯದ ಷೇರುಗಳನ್ನು ಹೂಡಿಕೆದಾರರು ಲಾಭಗಳಿಕೆಯ ಉದ್ದೇಶದಿಂದ ಮಾರಾಟ ಮಾಡಿದ ಕಾರಣ, ಏರಿಕೆಗೆ ತುಸು ಕಡಿವಾಣ ಬಿತ್ತು.

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ ಆಗಿದ್ದು ಹಾಗೂ ವಿದೇಶಿ ಹೂಡಿಕೆದಾರರು ಷೇರುಗಳ ಖರೀದಿಯಲ್ಲಿ ತೊಡಗಿದ್ದುದು ಸೂಚ್ಯಂಕಗಳ ಏರಿಕೆಗೆ ನೆರವಾದವು ಎಂದು ವರ್ತಕರು ತಿಳಿಸಿದ್ದಾರೆ. ದಿನದ ಅಂತ್ಯಕ್ಕೆ ಸೆನ್ಸೆಕ್ಸ್ 367 ಅಂಶ ಏರಿಕೆ ಕಂಡು, 60,223 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 120 ಅಂಶ ಏರಿಕೆ ಕಂಡು 17,925 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು.

‘ಕೋವಿಡ್‌ ಪ್ರಕರಣಗಳು ಜಾಸ್ತಿ ಆಗಿರುವುದು ಮತ್ತು ಕಠಿಣ ನಿರ್ಬಂಧಗಳು ಜಾರಿ ಆಗುತ್ತಿರುವುದು ಮಾರುಕಟ್ಟೆಗಳ ಅಸ್ಥಿರತೆ ಮೇಲೆ ಪರಿಣಾಮ ಉಂಟುಮಾಡಿವೆ. ಡಿಸೆಂಬರ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕೆಲವು ಬ್ಯಾಂಕಿಂಗ್ ಕಂಪನಿಗಳು ಎರಡು ಅಂಕಿಗಳ ಬೆಳವಣಿಗೆ ದರ ದಾಖಲಿಸಿರುವ ಕಾರಣ ಬ್ಯಾಂಕಿಂಗ್ ವಲಯದ ಷೇರುಗಳ ಖರೀದಿ ಹೆಚ್ಚಿತ್ತು’ ಎಂದು ಜೀಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಬಿಎಸ್‌ಇ ಮಿಡ್‌ಕ್ಯಾಪ್ ಸೂಚ್ಯಂಕವು ಏರಿಕೆ ಕಂಡಿದೆ. ಬಿಎಸ್‌ಇ ಸ್ಮಾಲ್‌ ಕ್ಯಾಪ್ ಸೂಚ್ಯಂಕವು ಇಳಿಕೆ ದಾಖಲಿಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇಕಡ 0.01ರಷ್ಟು ಇಳಿಕೆ ಆಗಿದ್ದು ಬ್ಯಾರೆಲ್‌ಗೆ 79.9 ಡಾಲರ್‌ಗೆ ತಲುಪಿದೆ. ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು 20 ಪೈಸೆ ಏರಿಕೆ ಆಗಿ, ₹ 74.38ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT