ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆನ್ಸೆಕ್ಸ್, ನಿಫ್ಟಿ ಏರಿಕೆ

Last Updated 22 ನವೆಂಬರ್ 2022, 15:47 IST
ಅಕ್ಷರ ಗಾತ್ರ

ಮುಂಬೈ: ಮೂರು ದಿನಗಳಿಂದ ಇಳಿಕೆಯ ಹಾದಿಯಲ್ಲಿ ಇದ್ದ ದೇಶದ ಷೇರುಪೇಟೆ ಸೂಚ್ಯಂಕಗಳು ಮಂಗಳವಾರ ಏರಿಕೆ ದಾಖಲಿಸಿದವು. ಹೂಡಿಕೆದಾರರು ಐ.ಟಿ., ಲೋಹ ವಲಯದ ಷೇರುಗಳನ್ನು ಹೆಚ್ಚಾಗಿ ಖರೀದಿಸಿದರು. ವಿದೇಶಿ ಮಾರುಕಟ್ಟೆಗಳಲ್ಲಿನ ವಹಿವಾಟು ಸಕಾರಾತ್ಮಕವಾಗಿ ಇತ್ತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 274 ಅಂಶ ಏರಿಕೆ ಕಂಡಿತು. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 84 ಅಂಶ ಏರಿಕೆ ದಾಖಲಿಸಿತು.

‘ಚೀನಾದಲ್ಲಿ ಜಾರಿಯಲ್ಲಿ ಇರುವ ಲಾಕ್‌ಡೌನ್ ಕ್ರಮಗಳು ಜಾಗತಿಕ ಬೆಳವಣಿಗೆಯ ಮುನ್ನೋಟದ ಮೇಲೆ ನಕಾರಾತ್ಮಕ ಪರಿಣಾಮ ಉಂಟುಮಾಡಿವೆ. ಅಮೆರಿಕದಲ್ಲಿ ಹಣಕಾಸಿನ ನೀತಿ ಇನ್ನಷ್ಟು ಬಿಗಿಯಾಗಬಹುದು ಎಂಬ ನಿರೀಕ್ಷೆಯಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರ ಆಸಕ್ತಿ ತಗ್ಗಿದೆ’ ಎಂದು ಜಿಯೋಜಿತ್ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

‘ಮಾರುಕಟ್ಟೆಯ ಮೇಲೆ ನೇರವಾಗಿ ಪ್ರಭಾವ ಬೀರುವ ವಿಷಯಗಳು ಕಾಣುತ್ತಿಲ್ಲ. ಹೀಗಾಗಿ, ಜಾಗತಿಕ ಸೂಚ್ಯಂಕಗಳು ಹಾಗೂ ಮುಖ್ಯವಾಗಿ ಅಮೆರಿಕದ ಸೂಚ್ಯಂಗಳು ದೇಶಿ ಮಾರುಕಟ್ಟೆಯ ಮೇಲೆ ಪ್ರಭಾವ ಬೀರಲಿವೆ’ ಎಂದು ರೆಲಿಗೇರ್ ಬ್ರೋಕಿಂಗ್‌ನ ತಾಂತ್ರಿಕ ಸಂಶೋಧನಾ ವಿಭಾಗದ ಉಪಾಧ್ಯಕ್ಷ ಅಜಿತ್ ಮಿಶ್ರಾ ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ದರವು ಶೇಕಡ 0.67ರಷ್ಟು ಹೆಚ್ಚಾಗಿ ಪ್ರತಿ ಬ್ಯಾರೆಲ್‌ಗೆ 88.04 ಡಾಲರ್‌ನಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT