ಶನಿವಾರ, ಏಪ್ರಿಲ್ 1, 2023
31 °C

ಮತ್ತೆ 60 ಸಾವಿರದ ಗಡಿ ದಾಟಿದ ಸೆನ್ಸೆಕ್ಸ್

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮೂರು ದಿನಗಳಿಂದ ಇಳಿಕೆಯ ಹಾದಿಯಲ್ಲಿ ಇದ್ದ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಸೋಮವಾರ ಭರ್ಜರಿ ಏರಿಕೆ ದಾಖಲಿಸಿತು.

831 ಅಂಶಗಳ ಏರಿಕೆ ಕಂಡ ಸೆನ್ಸೆಕ್ಸ್‌ ಮತ್ತೆ 60 ಸಾವಿರದ ಗಡಿಯನ್ನು ದಾಟಿ ನಡೆಯಿತು. ದಿನದ ಅಂತ್ಯಕ್ಕೆ 60,138 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 258 ಅಂಶಗಳ ಏರಿಕೆ ದಾಖಲಿಸಿತು.

‘ಜಾಗತಿಕ ಮಾರುಕಟ್ಟೆಗಳಲ್ಲಿ ತೇಜಿ ವಹಿವಾಟು ನಡೆದಿದ್ದು ಭಾರತದ ಬಂಡವಾಳ ಮಾರುಕಟ್ಟೆಗಳ ಮೇಲೆಯೂ ಪರಿಣಾಮ ಬೀರಿತು. ಎರಡನೆಯ ತ್ರೈಮಾಸಿಕದಲ್ಲಿ ಕಂಪನಿಗಳ ಗಳಿಕೆಯು ಚೆನ್ನಾಗಿ ಆಗಿರುವುದು ಕೂಡ ಸಕಾರಾತ್ಮಕ ವಹಿವಾಟಿಗೆ ಒಂದು ಕಾರಣ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್‌ ಸೂಚ್ಯಂಕಗಳು ಕೂಡ ಏರಿಕೆ ಕಂಡವು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಬ್ಯಾರೆಲ್‌ಗೆ ಶೇಕಡ 0.82ರಷ್ಟು ಹೆಚ್ಚಳ ಆಗಿ 84.41 ಅಮೆರಿಕನ್‌ ಡಾಲರ್‌ಗೆ ತಲುಪಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು