ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರುಪೇಟೆ ಸಾರ್ವಕಾಲಿಕ ಗರಿಷ್ಠ

ಮುಂಗಾರು, ತ್ರೈಮಾಸಿಕ ಫಲಿತಾಂಶದ ಪ್ರಭಾವ
Last Updated 16 ಏಪ್ರಿಲ್ 2019, 19:59 IST
ಅಕ್ಷರ ಗಾತ್ರ

ಮುಂಬೈ: ಮುಂಗಾರು ವಾಡಿಕೆಯಂತೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾರುಕಟ್ಟೆಯ ನಿರೀಕ್ಷೆಯಂತೆ ಕಂಪನಿಗಳ ತ್ರೈಮಾಸಿಕ ಫಲಿತಾಂಶ ಪ್ರಕಟವಾಗುತ್ತಿದೆ. ಈ ಬೆಳವಣಿಗೆಗಳಿಂದಾಗಿ ಷೇರುಪೇಟೆಗಳ ವಹಿವಾಟು ದಾಖಲೆ ಮಟ್ಟಕ್ಕೆ ತಲುಪಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) 370 ಅಂಶ ಜಿಗಿತ ಕಂಡು ಸಾರ್ವಕಾಲಿಕ ದಾಖಲೆ ಮಟ್ಟವಾದ 39,275 ಅಂಶಗಳಿಗೆ ತಲುಪಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 97ಅಂಶ ಹೆಚ್ಚಾಗಿ ಗರಿಷ್ಠ ಮಟ್ಟವಾದ 11,787 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ಹಣಕಾಸು, ಗ್ರಾಹಕ ಬಳಕೆ ವಸ್ತುಗಳು, ವಾಹನ, ತೈಲ ಮತ್ತು ಅನಿಲ ಷೇರುಗಳು ಉತ್ತಮ ಗಳಿಕೆ ಕಂಡಿವೆ. ಇಂಡಸ್‌ ಇಂಡ್‌ ಬ್ಯಾಂಕ್‌ ಶೇ 3.96ರಷ್ಟು ಮತ್ತು ಐಸಿಐಸಿಐ ಬ್ಯಾಂಕ್‌ ಶೇ 3.58 ಗರಿಷ್ಠ ಏರಿಕೆ ದಾಖಲಿಸಿವೆ.

ಟಿಸಿಎಸ್‌ ಮಾರುಕಟ್ಟೆ ಮೌಲ್ಯ ವೃದ್ಧಿ:ಉತ್ತಮ ಫಲಿತಾಂಶ ಪ್ರಕಟಿಸಿರುವ ಕಾರಣಕ್ಕಾಗಿ ಟಿಸಿಎಸ್‌ ಷೇರುಗಳು ಮಂಗಳವಾರ ಶೇ 1ರಷ್ಟು ಏರಿಕೆ ಕಂಡಿವೆ. ಇದರಿಂದ ಕಂಪನಿಯ ಮಾರುಕಟ್ಟೆ ಮೌಲ್ಯ ₹ 8 ಲಕ್ಷ ಕೋಟಿಗೆ ಏರಿಕೆಯಾಗಿದೆ.

ಸದ್ಯ, ರಿಲಯನ್ಸ್‌ ಇಂಡಸ್ಟ್ರೀಸ್‌ ₹ 8.52 ಲಕ್ಷ ಕೋಟಿ ಮಾರುಕಟ್ಟೆ ಮೌಲ್ಯ ಹೊಂದಿದೆ. ಷೇರು ಮಾರುಕಟ್ಟೆ ಮೌಲ್ಯದ ದೃಷ್ಟಯಿಂದ ಮೊದಲ ಸ್ಥಾನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT