ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೂಡಿಕೆದಾರರ ಸಂಪತ್ತು ₹ 4.5 ಲಕ್ಷ ಕೋಟಿ ವೃದ್ಧಿ

Last Updated 4 ಏಪ್ರಿಲ್ 2022, 15:21 IST
ಅಕ್ಷರ ಗಾತ್ರ

ಮುಂಬೈ: ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಚ್‌ಡಿಎಫ್‌ಸಿ ಲಿಮಿಟೆಡ್‌ ವಿಲೀನಗೊಳ್ಳುವ ನಿರ್ಧಾರವು ದೇಶದ ಷೇರುಪೇಟೆಗಳಲ್ಲಿ ಸೋಮವಾರ ಸೂಚ್ಯಂಕಗಳ ಓಟಕ್ಕೆ ಕಾರಣವಾಯಿತು.

ಬ್ಯಾಂಕಿಂಗ್‌ ಮತ್ತು ಹಣಕಾಸು, ಎಫ್‌ಎಂಸಿಜಿ, ಐ.ಟಿ. ಮತ್ತು ಲೋಹ ವಲಯದ ಷೇರುಗಳು ಸಹ ಉತ್ತಮ ಖರೀದಿ ವಹಿವಾಟಿಗೆ ಒಳಗಾಗಿ ಸಕಾರಾತ್ಮಕ ವಹಿವಾಟಿಗೆ ಉತ್ತೇಜನ ನೀಡಿದವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 1,335 ಅಂಶ ಜಿಗಿತ ಕಂಡು 60,611 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು. ಇದರಿಂದಾಗಿ ಹೂಡಿಕೆದಾರರ ಸಂಪತ್ತು ಮೌಲ್ಯವು ಒಂದೇ ದಿನ ₹ 4.5 ಲಕ್ಷ ಕೋಟಿಯಷ್ಟು ಹೆಚ್ಚಾಗಿದೆ. ಷೇರುಪೇಟೆಯ ಒಟ್ಟಾರೆ ಬಂಡವಾಳ ಮೌಲ್ಯ ₹ 272.46 ಲಕ್ಷ ಕೋಟಿಗೆ ಏರಿಕೆ ಆಗಿದೆ.

ಸೆನ್ಸೆಕ್ಸ್‌ನಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್ ಷೇರು ಮೌಲ್ಯ ಶೇ 9.97ರಷ್ಟು ಮತ್ತು ಎಚ್‌ಡಿಎಫ್‌ಸಿ ಲಿಮಿಟೆಡ್‌ ಷೇರು ಮೌಲ್ಯ ಶೇ 9.30ರಷ್ಟು ಹೆಚ್ಚಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 383 ಅಂಶ ಏರಿಕೆ ಕಂಡು 18,053 ಅಂಶಗಳಿಗೆ ತಲುಪಿತು. ಬಿಎಸ್‌ಇ ಮಿಡ್‌ಕ್ಯಾಪ್‌ ಮತ್ತು ಸ್ಮಾಲ್‌ಕ್ಯಾಪ್‌ ಸೂಚ್ಯಂಕಗಳು ಶೇ 1.68ರವರೆಗೆ ಏರಿಕೆ ಕಂಡವು.

ರೂಪಾಯಿ ಮೌಲ್ಯ ವೃದ್ಧಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ 21 ಪೈಸೆ ಹೆಚ್ಚಾಗಿದ್ದು ಒಂದು ಡಾಲರ್‌ಗೆ ₹ 75.53ರಂತೆ ವಿನಿಮಯಗೊಂಡಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರವು ಶೇ 1.05ರಷ್ಟು ಇಳಿಕೆ ಕಂಡು ಒಂದು ಬ್ಯಾರಲ್‌ಗೆ 103.29 ಡಾಲರ್‌ಗಳಿಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT