ಗುರುವಾರ , ಫೆಬ್ರವರಿ 27, 2020
19 °C

ಪೇಟೆಯಲ್ಲಿ ಮಾರಾಟದ ಒತ್ತಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ದೇಶದ ಷೇರುಪೇಟೆಗಳಲ್ಲಿ ಗುರುವಾರ ಮಾರಾಟದ ಒತ್ತಡ ಕಂಡುಬಂದು ಸೂಚ್ಯಂಕಗಳು ಇಳಿಕೆ ಕಾಣುವಂತಾಯಿತು.

ಬುಧವಾರದ ವಹಿವಾಟಿನಲ್ಲಿ ಚೇತರಿಕೆ ಕಂಡಿದ್ದ ವಹಿವಾಟು ಗುರುವಾರ ಮತ್ತೆ ನಕಾರಾತ್ಮಕ ಹಾದಿ ಹಿಡಿಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) ಸಕಾರಾತ್ಮಕವಾಗಿ ವಹಿವಾಟು ಆರಂಭಿಸಿತ್ತು. ಆದರೆ ಕಡೆಯ ಒಂದು ಗಂಟೆಯಲ್ಲಿ ನಡೆದ ಮಾರಾಟದ ಒತ್ತಡದಿಂದ 324 ಅಂಶ ಇಳಿಕೆಯಾಗಿ 38,730 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು. 

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 85 ಅಂಶ ಇಳಿಕೆಯಾಗಿ 11,641 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆ, ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ವಾಹನ, ಲೋಹ, ಇಂಧನ ಮತ್ತು ಹಣಕಾಸು ವಲಯದ ಷೇರುಗಳು ಅತಿಯಾದ ಮಾರಾಟದ ಒತ್ತಡಕ್ಕೆ ಒಳಗಾದವು. ಇದು ಪರಿಣಾಮ ವಹಿವಾಟಿನ ಮೇಲೆ ಪ್ರತಿಫಲಿಸಿತು.

ಮಾರ್ಚ್‌ ತಿಂಗಳ ವಾಯಿದಾ ವಹಿವಾಟು ಗುರುವಾರ ಮುಕ್ತಾಯವಾಗಲಿರುವುದು ಸಹ ಸೂಚ್ಯಂಕದ ಇಳಿಕೆಗೆ ಕಾರಣವಾಯಿತು ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು