ಶನಿವಾರ, ಫೆಬ್ರವರಿ 22, 2020
19 °C

ಸಂವೇದಿ ಸೂಚ್ಯಂಕ 413 ಅಂಶ ಗಳಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಬ್ಯಾಂಕಿಂಗ್‌, ಹಣಕಾಸು, ದೂರಸಂಪರ್ಕ ಮತ್ತು ಐ.ಟಿ ಷೇರುಗಳು ಉತ್ತಮ ಖರೀದಿ ವಹಿವಾಟಿಗೆ ಒಳಗಾಗಿದ್ದರಿಂದ ಗುರುವಾರ ದೇಶಿ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ನಡೆಯಿತು.

ಸರ್ಕಾರಿ ಬಾಂಡ್‌ಗಳ ಮಾರ್ಚ್‌ ತಿಂಗಳ ವಾಯಿದಾ ವಹಿವಾಟು ಗುರುವಾರ ಮುಕ್ತಾಯವಾಗಿತ್ತು. ಇದು ಸಹ ಹೂಡಿಕೆ ಚಟುವಟಿಕೆಯನ್ನು ಹೆಚ್ಚಾಗುವಂತೆ ಮಾಡಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) 413 ಅಂಶ ಚೇತರಿಕೆ ಕಂಡು 38,545 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 124 ಅಂಶ ಹೆಚ್ಚಾಗಿ 11,570 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಮುಂದಿನ ವಾರ ಪ್ರಕಟವಾಗಲಿರುವ ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆಯಲ್ಲಿ ಬಡ್ಡಿದರ ಕಡಿತ
ಮಾಡಬಹುದು ಎನ್ನುವ ನಿರೀಕ್ಷೆಯಿಂದ ದರ ಸೂಕ್ಷ್ಮ ವಲಯಗಳಾದ ಬ್ಯಾಂಕಿಂಗ್‌, ರಿಯಲ್‌ ಎಸ್ಟೇಟ್‌ ಮತ್ತು ವಾಹನ ಷೇರುಗಳ ಬೆಲೆಯಲ್ಲಿ ಏರಿಕೆ ಕಂಡಬಂದಿತು.

ರೂಪಾಯಿ ಮೌಲ್ಯ ಇಳಿಕೆ

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 42 ಪೈಸೆ ಇಳಿಕೆ ಕಂಡು, ಒಂದು ಡಾಲರ್‌ಗೆ ₹69.30ರಂತೆ ವಿನಿಮಯಗೊಂಡಿತು.

ಡಾಲರ್‌ ಮೌಲ್ಯ ವೃದ್ಧಿಯಿಂದಾಗಿ ರೂಪಾಯಿ ಮೌಲ್ಯದಲ್ಲಿ ಇಳಿಕೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಜಾಗತಿಕ ಆರ್ಥಿಕ ಪ್ರಗತಿಯ ಮುನ್ನೋಟ ಉತ್ತೇಜನಕಾರಿಯಾಗಿಲ್ಲ. ಹೀಗಾಗಿ ಕೇಂದ್ರೀಯ ಬ್ಯಾಂಕ್‌ಗಳು ಆರ್ಥಿಕ ಉತ್ತೇಜಕ್ಕೆ ಪೂರಕವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ. ಹೀಗಾಗಿ ಏಷ್ಯಾದ ಕರೆನ್ಸಿಗಳ ಮೌಲ್ಯದಲ್ಲಿ ಇಳಿಕೆ ಕಂಡುಬಂದಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)