ಗುರುವಾರ , ಮೇ 19, 2022
24 °C

ಸತತ ನಾಲ್ಕನೆಯ ದಿನವೂ ಸೆನ್ಸೆಕ್ಸ್ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಹಾಗೂ ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ ಸತತ ನಾಲ್ಕನೆಯ ದಿನವೂ ಕುಸಿತ ಕಂಡವು.

ಅಮೆರಿಕದ ಹಣದುಬ್ಬರಕ್ಕೆ ಸಂಬಂಧಿಸಿದ ಅಂಕಿ–ಅಂಶಗಳ ಮೇಲೆ ಹೂಡಿಕೆದಾರರು ಕಣ್ಣಿಟ್ಟಿದ್ದಾರೆ. ವಿದೇಶಿ ಹೂಡಿಕೆದಾರರು ಬಂಡವಾಳ ಹಿಂತೆಗೆತವನ್ನು ಮುಂದುವರಿಸಿರುವುದು, ಕಚ್ಚಾ ತೈಲ ಬೆಲೆ ಏರಿಕೆ ಆಗಿರುವುದು ಕುಸಿತಕ್ಕೆ ಕಾರಣ ಎಂದು ವರ್ತಕರು ತಿಳಿಸಿದ್ದಾರೆ.

ಸೆನ್ಸೆಕ್ಸ್ 276 ಅಂಶ, ನಿಫ್ಟಿ 72 ಅಂಶ ಇಳಿಕೆ ಕಂಡಿವೆ. ‘ದೇಶಿ ಹೂಡಿಕೆದಾರರ ವಿಶ್ವಾಸ ತಗ್ಗಿದೆ. ವಿದೇಶಿ ಹೂಡಿಕೆದಾರರು ಮಾರಾಟಕ್ಕೇ ಹೆಚ್ಚು ಗಮನ ನೀಡಿದ್ದಾರೆ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಬ್ಯಾರೆಲ್‌ಗೆ ಶೇಕಡ 3.12ರಷ್ಟು ಹೆಚ್ಚಳವಾಗಿ 105.7 ಡಾಲರ್‌ಗೆ ತಲುಪಿದೆ. ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 10 ಪೈಸೆ ಚೇತರಿಕೆ ಕಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು