ಮಂಗಳವಾರ, ಆಗಸ್ಟ್ 11, 2020
24 °C

ಚೇತರಿಕೆ ಹಾದಿಗೆ ಷೇರುಪೇಟೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ತ್ರೈಮಾಸಿಕದಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆ ಮತ್ತು ಜಾಗತಿಕ ಮಟ್ಟದಲ್ಲಿನ ಸಕಾರಾತ್ಮಕ ವಿದ್ಯಮಾನಗಳ ಫಲವಾಗಿ ಷೇರುಪೇಟೆ ವಹಿವಾಟು ಮಂಗಳವಾರ ಚೇತರಿಕೆ ಹಾದಿಗೆ ಮರಳಿತು.

ಬ್ಯಾಂಕಿಂಗ್‌ ಮತ್ತು ವಾಹನ ಉದ್ಯಮದ ಷೇರುಗಳು ಉತ್ತಮ ಖರೀದಿ ವಹಿವಾಟಿಗೆ ಒಳಗಾಗಿದ್ದವು. ಇದು ಸಹ ಸೂಚ್ಯಂಕದ ಏರುಮುಖ ಚಲನೆಗೆ ಬೆಂಬಲ ನೀಡಿತು ಎಂದು ದಲ್ಲಾಳಿಗಳು ಹೇಳಿದ್ದಾರೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) 239 ಅಂಶ ಹೆಚ್ಚಾಗಿ 38,939 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 67 ಅಂಶ ಹೆಚ್ಚಾಗಿ 11,671 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಷೇರುಗಳ ಖರೀದಿಗೆ ಹೆಚ್ಚಿನ ಗಮನ ನೀಡುತ್ತಿದ್ದಾರೆ. ಇದೂ ಸೂಚ್ಯಂಕದ ಓಟಕ್ಕೆ ಉತ್ತೇಜನ ನೀಡುತ್ತಿದೆ. ಯೆಸ್‌ ಬ್ಯಾಂಕ್‌ ಶೇ 4.08ರಷ್ಟು ಗರಿಷ್ಠ ಏರಿಕೆ ಕಂಡಿತು. ಟಾಟಾ ಮೋಟರ್ಸ್‌, ಐಸಿಐಸಿಐ ಬ್ಯಾಂಕ್‌, ಬಜಾಜ್ ಆಟೊ, ಕೋಲ್‌ ಇಂಡಿಯಾ ಷೇರುಗಳು ಗಳಿಕೆ ಸಾಧಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು