ಮಂಗಳವಾರ, ಡಿಸೆಂಬರ್ 7, 2021
20 °C

ಅತಿಯಾದ ಮಾರಾಟದ ಒತ್ತಡ; ಸೆನ್ಸೆಕ್ಸ್ 410 ಅಂಶ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಐ.ಟಿ., ಹಣಕಾಸು ಮತ್ತು ದೂರಸಂಪರ್ಕ ವಲಯದ ಷೇರುಗಳು ಅತಿಯಾದ ಮಾರಾಟದ ಒತ್ತಡಕ್ಕೆ ಒಳಗಾಗಿದ್ದರಿಂದ ದೇಶದ ಷೇರುಪೇಟೆಗಳಲ್ಲಿ ಮಂಗಳವಾರ ಸೂಚ್ಯಂಕಗಳು ಇಳಿಕೆ ಕಾಣುವಂತಾಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ವಹಿವಾಟಿನ ಒಂದು ಹಂತದಲ್ಲಿ 1,032 ಅಂಶಗಳಷ್ಟು ಕುಸಿದಿತ್ತು. ನಂತರ ತುಸು ಚೇತರಿಕೆ ಹಾದಿಗೆ ಮರಳಿದ್ದರಿಂದ ವಹಿವಾಟಿನ ಅಂತ್ಯದ ವೇಳೆಗೆ ಕುಸಿತವು 410 ಅಂಶಗಳಿಗೆ ತಲುಪಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 107 ಅಂಶ ಇಳಿಕೆ ಕಂಡಿತು. ಬಿಎಸ್‌ಇ ಮಿಡ್‌ ಮತ್ತು ಸ್ಮಾಲ್‌ ಕ್ಯಾಪ್‌ ಸೂಚ್ಯಂಕಗಳು ಶೇ 0.71ರವರೆಗೂ ಇಳಿಕೆ ಕಂಡವು.

ಅಮೆರಿಕದ ಬಾಂಡ್‌ ಗಳಿಕೆ ಮತ್ತು ಕಚ್ಚಾ ತೈಲ ದರ ಏರಿಕೆಯ ಜೊತೆಗೆ ಚೀನಾದಲ್ಲಿನ ವಿದ್ಯುತ್‌ ಕಡಿತವು ಜಾಗತಿಕ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದವು. ಇದರಿಂದಾಗಿ ದೇಶಿ ಷೇರುಪೇಟೆಗಳಲ್ಲಿ ವಹಿವಾಟು ಇಳಿಕೆ ಕಂಡಿತು ಎಂದು ಜಿಯೋಜಿತ್ ಹಣಕಾಸು ಸೇವೆಗಳ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು