ಭಾನುವಾರ, ಜೂಲೈ 5, 2020
27 °C

ಚೀನಾ ವೈರಸ್‌ ಪ್ರಭಾವ: ಸೂಚ್ಯಂಕ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ : ಚೀನಾ ವೈರಸ್‌ ಅತ್ಯಂತ ವೇಗವಾಗಿ ಹರಡುತ್ತಿರುವುದರಿಂದ ಹೂಡಿಕೆದಾರರು ಆತಂಕಕ್ಕೆ ಒಳಗಾಗಿದ್ದಾರೆ. ಇದರಿಂದಾಗಿ ದೇಶಿ ಷೇರುಪೇಟೆಯಲ್ಲಿ ಸೋಮವಾರ ಮಾರಾಟದ ಒತ್ತಡ ಕಂಡುಬಂದು ಸೂಚ್ಯಂಕಗಳು ಇಳಿಕೆ ಕಂಡವು. ಹಣಕಾಸು ಮತ್ತು ಲೋಹ ವಲಯದ ಷೇರುಗಳು ಹೆಚ್ಚಿನ ಹಾನಿ ಅನುಭವಿಸಿದವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 458 ಅಂಶ ಇಳಿಕೆ ಕಂಡು ನಾಲ್ಕು ತಿಂಗಳ ಕನಿಷ್ಠ ಮಟ್ಟವಾದ 41,155 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 129 ಅಂಶ ಇಳಿಕೆ ಕಂಡು 12,119 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಗರಿಷ್ಠ ನಷ್ಟ: ಟಾಟಾ ಸ್ಟೀಲ್‌ ಷೇರು ಶೇ 4.31ರಷ್ಟು ಗರಿಷ್ಠ ನಷ್ಟ ಕಂಡಿದೆ. ಇಂಡಸ್‌ಇಂಡ್‌ ಬ್ಯಾಂಕ್‌, ಎಚ್‌ಡಿಎಫ್‌ಸಿ ಬ್ಯಾಂಕ್‌, ಎಸ್‌ಬಿಐ, ಪವರ್‌ ಗ್ರಿಡ್‌ ಮತ್ತು ಎಚ್‌ಡಿಎಫ್‌ಸಿ ಷೇರುಗಳೂ ಇಳಿಕೆ ಕಂಡಿವೆ.

0.40%:  ಬಿಎಸ್‌ಇ ಮಧ್ಯಮ ಮತ್ತು ಸಣ್ಣ ಶ್ರೇಣಿ ಸೂಚ್ಯಂಕಗಳ ಇಳಿಕೆ

10 ಪೈಸೆ:  ಡಾಲರ್ ಎದುರು ರೂಪಾಯಿ ಮೌಲ್ಯದಲ್ಲಿ ಆಗಿರುವ ಇಳಿಕೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು