ಮುಂಬೈ: ಸತತ ಎರಡು ದಿನಗಳಿಂದ ಇಳಿಕೆ ಕಂಡಿದ್ದ ಷೇರು ಸೂಚ್ಯಂಕಗಳು ಬುಧವಾರ ಚೇತರಿಕೆ ಕಂಡಿವೆ.
ಐ.ಟಿ ಷೇರುಗಳ ಮಾರಾಟ ಹೆಚ್ಚಳದಿಂದಾಗಿ ಷೇರು ಸೂಚ್ಯಂಕಗಳು ಏರಿಕೆಯಾಗಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 149 ಅಂಶ ಏರಿಕೆಯಾಗಿ, 79,105ಕ್ಕೆ ಸ್ಥಿರಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 4 ಅಂಶ ಹೆಚ್ಚಳವಾಗಿ 24,143ಕ್ಕೆ ಅಂತ್ಯಗೊಂಡಿತು.
ಟಿಸಿಎಸ್, ಎಚ್‌ಸಿಎಲ್ ಟೆಕ್ನಾಲಜೀಸ್, ಟೆಕ್ ಮಹೀಂದ್ರ, ಇನ್ಫೊಸಿಸ್, ಮಹೀಂದ್ರ ಆ್ಯಂಡ್ ಮಹೀಂದ್ರ ಮತ್ತು ಟಾಟಾ ಮೋಟರ್ಸ್ ಗಳಿಕೆ ಕಂಡಿವೆ.
ಅಲ್ಟ್ರಾಟೆಕ್ ಸಿಮೆಂಟ್, ಜೆಎಸ್‌ಡಬ್ಲ್ಯು ಸ್ಟೀಲ್, ಟಾಟಾ ಸ್ಟೀಲ್, ಅದಾನಿ ಪೋರ್ಟ್ಸ್, ಪವರ್ ಗ್ರಿಡ್ ಮತ್ತು ಬಜಾಜ್ ಫಿನ್‌ಸರ್ವ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.