ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2 ಕೋಟಿ ಯುವಕರಿಗೆ ಕೌಶಲ ತರಬೇತಿ: ಶೆಟ್ಟರ್

5ನೇ ಜಾಗತಿಕ ಸೇವಾ ವಸ್ತುಪ್ರದರ್ಶನ ಆರಂಭ
Last Updated 26 ನವೆಂಬರ್ 2019, 19:42 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ 2030ರ ಒಳಗಾಗಿ 2 ಕೋಟಿಗೂ ಅಧಿಕ ಯುವ ಸಮೂಹಕ್ಕೆ ಕೌಶಲ ತರಬೇತಿ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಇದಕ್ಕೆ ಪೂರಕವಾದ ಮೂಲಸೌಕರ್ಯಗಳನ್ನು ಸರ್ಕಾರ ಒದಗಿಸುತ್ತಿದೆ’ ಎಂದುಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರು ಮಾಹಿತಿ ನೀಡಿದರು.

ನಗರದಲ್ಲಿ ಮಂಗಳವಾರದಿಂದ ಮೂರು ದಿನಗಳವರೆಗೆ ನಡೆಯುತ್ತಿರುವ ಜಾಗತಿಕ ಸೇವಾವಸ್ತು ಪ್ರದರ್ಶನದ (ಜಿಇಎಸ್‌) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘1,700ಕ್ಕೂ ಅಧಿಕ ಐಐಟಿಗಳು ಮತ್ತು 290 ಪಾಲಿಟೆಕ್ನಿಕ್‌ಗಳು ಕೌಶಲ ತರಬೇತಿ ನೀಡುತ್ತಿವೆ. ಉನ್ನತ ಶಿಕ್ಷಣ ಪಡೆಯುವ ಉದ್ದೇಶದಿಂದ ಭಾರತಕ್ಕೆ ಬರುತ್ತಿರುವವರಲ್ಲಿ ಶೇ 26ರಷ್ಟು ವಿದ್ಯಾರ್ಥಿಗಳು ಕರ್ನಾಟಕವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಎನ್‌ಎಲ್‌ಎಸ್‌ಐಯು, ಐಐಎಸ್‌ಸಿ, ಐಐಎಂನಂತಹ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಪ್ರತಿಭಾನ್ವಿತರನ್ನು ಸೃಷ್ಟಿಸುತ್ತಿವೆ’ ಎಂದರು.

‘ರಾಜ್ಯದ ಒಟ್ಟಾರೆ ಆಂತರಿಕ ಉತ್ಪಾದನೆಗೆ ಸೇವಾ ವಲಯವು ಶೇ 68ರಷ್ಟು ಕೊಡುಗೆ ನೀಡುತ್ತಿದ್ದು, ದೇಶದ ಸೇವಾ ವಲಯದ ಬೆಳವಣಿಗೆಯಲ್ಲಿಯೂ ಪ್ರಮುಖ ಪಾತ್ರವಹಿಸುತ್ತಿದೆ. ದೇಶದಲ್ಲಿ ಕಾರ್ಮಿಕರ ಸೃಷ್ಟಿಯಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ’ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದರು.

‘ಭಾರತವು ವೈದ್ಯಕೀಯ ತಂತ್ರಜ್ಞಾನದಲ್ಲಿ ಉತ್ತಮ ಬೆಳವಣಿಗೆ ಕಾಣಲಿದೆ. ವಿಶ್ವದಲ್ಲಿ ನಡೆಯುತ್ತಿರುವ ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಭಾರತದ ಪಾಲು ಸದ್ಯ ಶೇ 16 ರಿಂದ ಶೇ 17ರಷ್ಟಿದೆ. ಮುಂದಿನ ದಿನಗಳಲ್ಲಿ ಈ ಪ್ರಮಾಣ ಇನ್ನಷ್ಟು ಏರಿಕೆಯಾಗಲಿದೆ’ ಎಂದು ನಾರಾಯಣ ಹೃದಯಾಲಯದ ನಿರ್ದೇಶಕ ದೇವಿ ಶೆಟ್ಟಿ ತಿಳಿಸಿದರು.

ಪ್ರತ್ಯೇಕ ಕಚೇರಿ: ಗೋಯಲ್

‘ಸೇವಾ ವಲಯದ ಉತ್ತೇಜನಕ್ಕಾಗಿ ದೇಶದಲ್ಲಿ ಪ್ರತ್ಯೇಕ ಕಚೇರಿ ಸ್ಥಾಪಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪೀಯೂಷ್ ಗೋಯಲ್ ತಿಳಿಸಿದರು.

ಜಾಗತಿಕ ಸೇವಾ ವಸ್ತುಪ್ರದರ್ಶನದ ಆರಂಭದ ಸಂದರ್ಭದಲ್ಲಿ ಅವರು ಮಾತನಾಡಿದರು.ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅನುಪಸ್ಥಿತಿಯಲ್ಲಿ ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರು ಕಾರ್ಯಕ್ರಮದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದಾರೆ.ವಸ್ತುಪ್ರದರ್ಶನದಲ್ಲಿ 75 ದೇಶಗಳ 421 ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT