ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಸಿದ ಜಿಡಿಪಿ ಬೆಳವಣಿಗೆ ದರ

ವೇಗದ ಬೆಳವಣಿಗೆ ಕಾಣುತ್ತಿರುವ ಆರ್ಥಿಕತೆ ಎಂಬ ಹೆಗ್ಗಳಿಕೆ
Last Updated 30 ನವೆಂಬರ್ 2022, 15:53 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದ ಆರ್ಥಿಕ ಬೆಳವಣಿಗೆ ದರವು ಜುಲೈ–ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇಕಡ 6.3ಕ್ಕೆ ಇಳಿಕೆ ಆಗಿದೆ. ತಯಾರಿಕಾ ವಲಯ ಮತ್ತು ಗಣಿಗಾರಿಕೆಯಲ್ಲಿ ಕಂಡ ಕುಸಿತವು ಒಟ್ಟು ಆರ್ಥಿಕ ಬೆಳವಣಿಗೆಯ ಮೇಲೆಯೂ ಪ್ರಭಾವ ಉಂಟುಮಾಡಿದೆ.

ಹೀಗಿದ್ದರೂ, ವಿಶ್ವದ ಪ್ರಮುಖ ಅರ್ಥ ವ್ಯವಸ್ಥೆಗಳ ಪೈಕಿ ಅತ್ಯಂತ ವೇಗದ ಬೆಳವಣಿಗೆ ಸಾಧಿಸಿರುವ ಅರ್ಥ ವ್ಯವಸ್ಥೆ ಎಂಬ ಹೆಗ್ಗಳಿಕೆಯನ್ನು ಭಾರತ ಉಳಿಸಿಕೊಂಡಿದೆ. ಚೀನಾದ ಅರ್ಥ ವ್ಯವಸ್ಥೆಯು ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ 3.9ರಷ್ಟು ಮಾತ್ರ ಬೆಳವಣಿಗೆ ಕಂಡಿದೆ.

ಹಿಂದಿನ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ದೇಶದ ಅರ್ಥ ವ್ಯವಸ್ಥೆಯು ಶೇ 8.4ರಷ್ಟು ಬೆಳವಣಿಗೆ ಕಂಡಿತ್ತು ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ ಬಿಡುಗಡೆ ಮಾಡಿರುವ ಅಂಕಿ–ಅಂಶಗಳು ಹೇಳಿವೆ. ಈ ವರ್ಷದ ಏಪ್ರಿಲ್‌–ಜೂನ್ ಅವಧಿಯಲ್ಲಿ ಅರ್ಥ ವ್ಯವಸ್ಥೆಯು ಶೇ 13.5ರಷ್ಟು ಬೆಳವಣಿಗೆ ದಾಖಲಿಸಿದೆ.

ಸೆಪ್ಟೆಂಬರ್ ತ್ರೈಮಾಸಿಕದ ಜಿಡಿಪಿ ಬೆಳವಣಿಗೆ ದರವು ಆರ್‌ಬಿಐ ಅಂದಾಜಿಸಿದ್ದಂತೆಯೇ ಇದೆ. ಜಿಡಿಪಿ ಬೆಳವಣಿಗೆ ದರವು ಶೇ 6.1ರಿಂದ ಶೇ 6.3ರಷ್ಟು ಇರಬಹುದು ಎಂದು ಆರ್‌ಬಿಐ ಈಚೆಗೆ ಅಂದಾಜು ಮಾಡಿತ್ತು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಒಟ್ಟಾರೆಯಾಗಿ ಶೇ 6.8ರಿಂದ ಶೇ 7ರಷ್ಟು ಬೆಳವಣಿಗೆ ಸಾಧಿಸುವ ಹಾದಿಯಲ್ಲಿ ಅರ್ಥ ವ್ಯವಸ್ಥೆ ಇದೆ ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ವಿ. ಅನಂತ ನಾಗೇಶ್ವರನ್ ಹೇಳಿದ್ದಾರೆ.

‘ಪರ್ಚೇಸಿಂಗ್ ಮ್ಯಾನೇಜರ್ಸ್‌ ಇಂಡೆಕ್ಸ್, ಬ್ಯಾಂಕ್‌ಗಳು ಸಾಲ ನೀಡುವುದರಲ್ಲಿ ಕಾಣುತ್ತಿರುವ ಬೆಳವಣಿಗೆ ಮತ್ತು ವಾಹನಗಳ ಮಾರಾಟಕ್ಕೆ ಸಂಬಂಧಿಸಿದ ಅಂಕಿ–ಅಂಶಗಳು ಅರ್ಥ ವ್ಯವಸ್ಥೆಯು ಬೆಳವಣಿಗೆಯ ವೇಗವನ್ನು ಕಾಯ್ದುಕೊಂಡಿದೆ ಎಂಬುದನ್ನು ಹೇಳುತ್ತಿವೆ’ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT