ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿ ನಗರದಲ್ಲಿ ಸಹಕಾರಿ ಬ್ಯಾಂಕ್‌: ಅಮಿತ್ ಶಾ

Published 2 ಮಾರ್ಚ್ 2024, 13:19 IST
Last Updated 2 ಮಾರ್ಚ್ 2024, 13:19 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಪ್ರತಿಯೊಂದು ನಗರದಲ್ಲಿ ನಗರ ಸಹಕಾರಿ ಬ್ಯಾಂಕ್‌ ಆರಂಭಿಸಲಾಗುವುದು ಎಂದು ಕೇಂದ್ರ ಸಹಕಾರ ಖಾತೆ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ರಾಷ್ಟ್ರೀಯ ನಗರ ಸಹಕಾರ ಹಣಕಾಸು ಮತ್ತು ಅಭಿವೃದ್ಧಿ ನಿಗಮ (ಎನ್‌ಯುಸಿಎಫ್‌ಡಿಸಿ) ಉದ್ಘಾಟಿಸಿ ಮಾತನಾಡಿದ ಅವರು, ದೀರ್ಘ ಕಾಲದಿಂದ ದೇಶದಲ್ಲಿ ನಗರ ಸಹಕಾರಿಗಳು ಕಾರ್ಯಾಚರಣೆ ನಡೆಸುತ್ತಿವೆ. ಆದರೆ, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುವ ಇವು ವೇಗವಾಗಿ ಬೆಳಯಲಿಲ್ಲ. ನಗರ ಸಹಕಾರಿ ಬ್ಯಾಂಕ್‌ಗಳಿಗೆ ಸಹಾಯ ಮಾಡುವುದೇ ಎನ್‌ಯುಸಿಎಫ್‌ಡಿಸಿ ಮುಖ್ಯ ಉದ್ದೇಶ ಎಂದರು.

ದೇಶದಲ್ಲಿ 1,500ಕ್ಕೂ ಹೆಚ್ಚು ನಗರ ಸಹಕಾರಿ ಬ್ಯಾಂಕ್‌ಗಳು, 11 ಸಾವಿರ ಶಾಖೆಗಳು ಮತ್ತು ₹5 ಲಕ್ಷ ಕೋಟಿ ಠೇವಣಿ ಹೊಂದಿದೆ ಎಂದು ಹೇಳಿದರು.

ಎನ್‌ಯುಸಿಎಫ್‌ಡಿಸಿಯು ಬ್ಯಾಂಕಿಂಗೇತರ ಹಣಕಾಸು ಕಂಪನಿಯಾಗಿ ಮತ್ತು ನಗರ ಸಹಕಾರಿ ಬ್ಯಾಂಕಿಂಗ್ ವಲಯಕ್ಕೆ ಸ್ವಯಂ ನಿಯಂತ್ರಣ ಸಂಸ್ಥೆಯಾಗಿ ಕಾರ್ಯನಿರ್ವಹಿಸಲು ಆರ್‌ಬಿಐ ಅನುಮೋದನೆ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT